heavy rain alert With thunder: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಈಗಾಗಲೇ ಶುರುವಾಗಿದೆ. ಹೌದು, ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 14 ರಿಂದ 17 ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
heavy rain alert With thunder ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಕರಾವಳಿಯ ದಕ್ಷಿಣ ಕನ್ನಡ, ಉಡುಹು ಜಿಲ್ಲೆಯ ಕೆಲವೆಡೆ ಬುಧವಾರದಂದು ಗುಡುಗು ಸಹಿತಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 50 ರಿಂದ 60 ಕಿ. ಮೀ ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬೀದರ್, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿಯೂ ಇದೇ ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ತುಮಕೂರು, ಚಾಮರಾಜನಗರ, ಬಳ್ಳಾರಿ ಜಿಲ್ಲೆಯಲ್ಲಿ ಗಂಟೆಗೆ 50 ರಿಂದ 60 ಕಿ. ಮೀ ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಗಾಳಿ ಸಹಿತ ಹಲವೆಡೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಶನಿವಾರದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೇ 20 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ಈಗ ರೈತರ ಖಾತೆಗೆ ತಿಂಗಳಿಗೆ 3 ಸಾವಿರ ಪೆನ್ಶನ್ ಜಮೆಯಾಗಲಿದೆ
ಬಿಸಲ ಬೇಗೆಯಿಂದ ಕಂಗೆಟ್ಟಿದ್ದ ದೇಶದ ಜನತೆ ಮೇಲೆ ವರಣುದೇವ ಕೃಪೆ ತೋರಿದ್ದಾನೆ. ನೈಋತ್ಯ ಮಾನ್ಸೂನ್ ಮಾರುತಗಳು ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಕೆಲವು ಪ್ರದೇಶಗಳಿಗೆ ನಿಗದಿತ ಅವಧಿಗಿಂತ ಒಂದು ವಾರ ಮೊದಲೇ ಪ್ರವೇಶಿಸಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಅವಧಿ 7 ವರುಶದಲ್ಲೇ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆ ಪ್ರಕಾರ ದಕ್ಷಿಣ ಅಂಡಮಾನ್ ಸಮುದ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ನಲ್ಲಿ ಸಾಮಾನ್ಯವಾಗಿ ಮೇ 21 ರಂದು ಮಾನ್ಸೂನ್ ಆರಂಭವಾಗುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.