Four day heavy rain: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾರಿ ಗಾಳಿಯೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿಯೂ ಸಹಿತಿ ಭಾರಿ ಗೊಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ 40-50 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಮಳೆ ಸುರಿಯುತ್ತಿದೆ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿಯೂ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಇಂದು ವಾರ ಹೀಗೆ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಯಾವ ಯಾವ ಸರ್ವೆ ನಂಬರಿಗೆ FID ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ
ಕಳೆದ ಮೂರ್ನಾಲ್ಕು ದಿನದಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದೆ, ಹಗಲು ಪೂರ್ತಿ ಬಿಸಿಲಿನ ವಾತಾರವಣ ಇರಲಿದ್ದು, ಸಾಯಂಕಾಲ ಮಳೆರಾಯನ ಅಬ್ಬರು ಶುರುವಾಗುತ್ತಿದೆ. . ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ,
ಆಗ್ನೇಯ ಬಂಗಾಳ, ಆಂದ್ರಪ್ರದೇಶ ಕರಾವಳಿ, ತಮಿಳುನಾಡಿನಲ್ಲಿ ಸೈಕ್ಲೋನ್ ಹಿನ್ನೆಲೆ ತೆಲಂಗಾಣ,ಉತ್ತರ ತಮಿಳುನಾಡಿನಲ್ಲಿ ಭರ್ಜರಿ ಮಳೆಯಾಗುವ ಸಂಭವ ಇದು, ಇದರ ಪರಿಣಾಮ ಕರ್ನಾಟಕದಲ್ಲೂ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Four day heavy rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಸಾಲಪಡೆದಿದ್ದಾರೆಯೇ? ಇಲ್ಲೇ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.