5 ಲಕ್ಷ ಸಹಾಯಧನ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ

Written by Ramlinganna

Published on:

Mobile Canteen subsidy : ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಉದ್ಯಮಶೀಲತೆ (Enterprenuership) ಕುರಿತು ಒಂದು ತಿಂಗಳ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು  5 ಲಕ್ಷ ರೂಪಾಯಿಗಳ ಸಹಾಯಧನ ನೀಡಲು ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ 2025ರ ಜನವರಿ 31 ವರೆಗೆ ಅರ್ಜಿಗಳನ್ನು ಆಹ್ವಾನಿಸಿ,  ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Mobile Canteen subsidy ಸ್ವೀಕೃತವಾದ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಅಧ್ಯಕ್ಷರಿಂದ ಅನುಮೋದನೆಗೊಂಡಿರುವ ಪರಿಶಿಷ್ಟ ಜಾತಿ ವರ್ಗದ ಅಭ್ಯರ್ಥಿಗಳ ಅರ್ಹ  ಹಾಗೂ  ಅನರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಅರ್ಹತಾ ಪಟ್ಟಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ  ಆಕ್ಷೇಪಣೆಗಳು ಇದ್ದಲ್ಲಿ 2025ರ ಮೇ 26  ರೊಳಗಾಗಿ ಲಿಖಿತ ರೂಪದಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಕಛೇರಿಯಲ್ಲಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಸೇಡಂ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಸೇಡಂ ಶಿಶು ಅಭಿವೃದ್ದಿ ಯೋಜನೆಯಲ್ಲಿ 2024-25ನೇ ಸಾಲಿಗೆ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 19 ಸಹಾಯಕಿಯರ  ಹುದ್ದೆಗಳ ಆಯ್ಕೆಗೆ ಸಂಬAಧಿಸಿದAತೆ ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ 12-05-2025 ರಂದು ನಡೆದ ಸಮಿತಿ ಸಭೆಯಲ್ಲಿ ಸರ್ಕಾರದ ನಿಯಮಾವಳಿಯನ್ವಯ 6 ಅಂಗನವಾಡಿ ಕಾರ್ಯಕರ್ತೆಯರ  ಹಾಗೂ 18 ಅಂಗನವಾಡಿ ಸಹಾಯಕಿಯರ  ಹುದ್ದೆಗಳಿಗೆ ಸಂಬAಧಿಸಿದAತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಯಾವ ಯಾವ ಸರ್ವೆ ನಂಬರಿಗೆ FID ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರ 6 ಹುದ್ದೆಗಳಿಗೆ (ಬಿಜನಳ್ಳಿ, ಬೀರನಳ್ಳಿ-1, ಕುಕ್ಕುಂದಾ-1, ಕುರಕುಂಟಾ-10, ಕಿಷ್ಠಾಪೂರ, ಯಾನಾಗುಂದಿ-1) ಅಂಗನವಾಡಿ ಕೇಂದ್ರಗಳಿಗೆ ಹಾಗೂ ಒಟ್ಟು 19 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಪೈಕಿ ಕೊತ್ತಾಪಲ್ಲಿ ತಾಂಡಾಕ್ಕೆ ಮರುಪ್ರಕಟಣೆ ಮಾಡಲಾಗಿದೆ. ಉಳಿದ 18 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ (ಗೌಡನಳ್ಳಿ-1, ಬೆನಕನಳ್ಳಿ-2, ಸಟಪಟನಳ್ಳಿ, ಸಂಗಾವಿ.ಟಿ, ಮುಧೋಳ-9, ಕುರಕುಂಟಾ-2, ಬಟಗೇರಾ(ಬಿ)-1, ಬಟಗೇರಾ(ಬಿ)-4, ಬಟಗೇರಾ ಗೇಟ-1, ಕೊಂತ್ತನಪಲ್ಲಿ-2, ತೇಲ್ಕೂರ ಖಣಿ, ಗೋಪನಪಲ್ಲಿ-ಬಿ, ಶೆಟ್ಟಿಹೂಡಾ, ಕೋಡ್ಲಾ ಕ್ರಾಸ್, ಸ್ಲಂ ಬೋರ್ಡ, ಜಂಗಮವಾಡಾ, ದೊಡ್ಡ ಅಗಸಿ, ಛೋಟಿಗಿರಣಿ) ಅಂಗನವಾಡಿ ಕೇಂದ್ರಗಳಿಗೆ ಅಭ್ಯರ್ಥಿಗಳು ತಾತ್ಕಾಲಿಕವಾಗಿ ಆಯ್ಕೆಯಾಗಿರುತ್ತಾರೆ.

ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಬಗ್ಗೆ ವಿದ್ಯಾರ್ಹತೆ, ವಾಸಸ್ಥಳ, ವಯಸ್ಸು ಇನ್ನಿತರೆ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಪೂರಕ ದಾಖಲೆಗಳೊಂದಿಗೆ 2025ರ ಮೇ 23ರ ಮಧ್ಯಾಹ್ನ 1.30 ಗಂಟೆಯೊಳಗಾಗಿ ಸೇಡಂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ  ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅರ್ಹ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರು ತಮ್ಮ ಹತ್ತಿರದ ಕಚೇರಿಗೆ ಹೋಗಿ ಅರ್ಜಿಯನ್ನು ಪರಿಶೀಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಹೆಚ್ಚಿನ  ಮಾಹಿತಿಗೆ ತಮ್ಮ ಹತ್ತಿರದ ಸೇಡಂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು.

Leave a Comment