ತೋಟಗಾರಿಕೆ ಬೆಳೆಗಳಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Horticulture subsidy information:  ತೋಟಗಾರಿಕೆ ಬೆಳೆಗಳಿಗೆ ಸಬ್ಸಿಡಿ ನೀಡಲು ರೈತರಿಂದ ಅರ್ಜಿಆಹ್ವಾನಿಸಲಾಗಿದೆ.

ಹೌದು, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀ ಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮತ್ತು ಸಾಮರ್ಥ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆಬೆಳೆ ಅಭಿವೃದ್ಧಿ ಯೋಜನೆಯಗಳಡಿ ಸಹಾಯಧನ ಪಡೆಯಲು ಅರ್ಜಿ ಆಸಕ್ತಿಯುಳ್ಳ ಅರ್ಹ ರೈತರಿಂದ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Horticulture subsidy information

ಆಸಕ್ತಿಯುಳ್ಳ ರೈತರು ತಮ್ಮ ಸಂಬಂಧಪಟ್ಟ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಇದರ  ಸದುಪಯೋಗ ಪಡೆಯಬೇಕು.

ಇದನ್ನೂ ಓದಿ ನಿಮ್ಮ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು  ಹಾಗೂ ಅಫಜಲಪೂರ ಮೊಬೈಲ್ ಸಂಖ್ಯೆ-9743518608, ಚಿಂಚೋಳಿ-9611250501, ಚಿತ್ತಾಪೂರ-7760969088, ಕಲಬುರಗಿ- 9900108196, ಜೇವರ್ಗಿ-9986516251, ಸೇಡಂ-9972147778 ಹಾಗೂ ಆಳಂದ-8095143035ಗೆ ಸಂಪರ್ಕಿಸಲು ಕೋರಲಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಫಜಲಪುರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ ಈ ಕೆಳಕಂಡ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅರ್ಜುಣಗಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಎ., ಬಿ.ಇಡ್. ವಿದ್ಯಾರ್ಹತೆ ಹೊಂದಿರಬೇಕು. ಭೌತಶಾಸ್ತç, ರಸಾಯನಶಾಸ್ತç, ಗಣಿತ ಹಾಗೂ ಜೀವಶಾಸ್ತç ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಎಮ್.ಎಸ್ಸಿ., ಬಿ.ಇಡ್. ವಿದ್ಯಾರ್ಹತೆ ಹೊಂದಿರಬೇಕು. ಕಡ್ಡಾಯವಾಗಿ ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ತಾವು ಬೋಧಿಸುವ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸಲು 2025ರ ಮೇ 30 ಕೊನೆಯ ದಿನವಾಗಿದೆ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅರ್ಜುಣಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಮೊಬೈಲ್ ಸಂಖ್ಯೆ  9449906618 ಗೆ ಸಂಪರ್ಕಿಸಲು ಕೋರಲಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಮತ್ತು ನಾಗಾವಿ ಹಾಗೂ ಅಫಜಲಪುರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಕೆಳಕಂಡ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಗುಂಡಗುರ್ತಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

ಗುಂಡಗುರ್ತಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕನ್ನಡ, ಭೌತಶಾಸ್ತç, ರಸಾಯನಶಾಸ್ತç ವಿಷಯಗಳ ತಲಾ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ, ನಾಗಾವಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಭೌತಶಾಸ್ತç ಮತ್ತು ರಸಾಯನಶಾಸ್ತç ತಲಾ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ ಹಾಗೂ ಅರ್ಜುಣಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಇಂಗ್ಲೀಷ, ಭೌತಶಾಸ್ತç, ರಸಾಯನಶಾಸ್ತç, ಗಣಿತ ಹಾಗೂ ಜೀವಶಾಸ್ತç ತಲಾ ಒಂದು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಎಂ.ಎ., ಬಿ.ಇಡ್. ಹಾಗೂ ಎಮ್.ಎಸ್ಸಿ., ಬಿ.ಇಡ್. ವಿದ್ಯಾರ್ಹತೆ ಹೊಂದಿರಬೇಕು. ಮೂರು ವರ್ಷಗಳ ಅನುಭವ ಹೊಂದಿರಬೇಕು.

ಪ್ರತಿ ತಿಂಗಳು 18150 ರೂ.ಗಳ ವೇತನ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಗುಂಡರ್ಗುತಿ, ನಾಗಾವಿ, ಅರ್ಜುಣಗಿಗಳಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಿಂದ ಪಡೆದು ಭರ್ತಿ ಮಾಡಿ 2025ರ ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ  9902568306, 9483408131, 9449906618 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment