50 thouand guest teacher :ರಾಜ್ಯದ ವಿವಿಧ ಶಾಲಾ ಕಾಲೇಜುಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ 51 ಸಾವಿರ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗಿದೆ.
ಹೌದು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ. ರಾಜ್ಯದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಅತಿಥಿ ಶಿಕ್ಷಕರ ನೇಮಕ ಇದೇ ಮೊದಲು.
ಪ್ರಾಥಮಿಕ ಶಾಲೆಗಳಿಗೆ40 ಸಾವಿರ ಪ್ರೌಢ ಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ಒಟ್ಟು 51 ಸಾವಿರ ಅತಿಥಿ ಶಿಕ್ಷಕರನ್ನು ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವವರಿಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ ರಾಜ್ಯ ಸರ್ಕಾರ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೈ 29 ರಿಂದ ಶಾಲೆಗಳು ಪುನಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ.
ಇದನ್ನೂ ಓದಿ ನಿಮ್ಮ ಜಮೀನಿನ ಓರಿಜಿನಲ್ ಟಿಪ್ಪಣಿ Mobile ನಲ್ಲಿ ಹೀಗೆ ಚೆಕ್ ಮಾಡಿ
2025 -26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಶ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರಿಗೆ ಅಥವಾ ಶೈಕ್ಷಮಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತುಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಮಾಡಿಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.
50 thouand guest teacher ಮೇ 27 ರಂದು ಕ್ಯಾಂಪಸ್ ಸಂದರ್ಶನ
ಬೆಂಳೂರಿನ ಮೆ|| ಜಾನ್ಸನ್ ಲಿಫ್ಟ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಐ.ಟಿ.ಐ. ನಲ್ಲಿ ಪಾಸಾದ ಹಾಗೂ ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಎಲ್ಲಾ ವೃತ್ತಿಯ 25 ವರ್ಷದೊಳಗಿನ ಅಭ್ಯರ್ಥಿಗಳಿಗೆ ಉದ್ಯೋಗಕ್ಕಾಗಿ ಇದೇ ಮೇ 27 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ವೈಯಕ್ತಿಕ ವಿವರ (ಬಯೋಡೇಟಾ) ಎಸ್.ಎಸ್.ಎಲ್.ಸಿ. ಮತ್ತು ಐಟಿಐ ಅಂಕಪಟ್ಟಿ, ಭಾವಚಿತ್ರಗಳು, ಆಧಾರ್ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಗರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕವನ್ನು ವೀಕ್ಷಿಸಲು ಹಾಗೂ ದೂರವಾಣಿ ಸಂಖ್ಯೆ 7259272146 ಗೆ ಸಂಪರ್ಕಿಸಲು ಕೋರಲಾಗಿದೆ.