Rain alert do you know : ರಾಜ್ಯದಲ್ಲಿ ಬಿಡುವು ನೀಡಿದ್ದ ಮಳೆರಾಯ ಮತ್ತೆ ನಾಳೆಯಿಂದ ತನ್ನ ಅಬ್ಬರ ಶುರುಮಾಡಲಿದೆ. ಹೌದು, ಜೂನ್ 7 ರಾಜ್ಯದ ಉತ್ತರ ಕರ್ನಾಟಕದ 11 ಜಿಲ್ಲಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಜೂನ್ 8 ರಂದು ಸಹಾ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಲೆಯಾಗಲಿದೆ ಯಾವ ಪ್ರಮಾಣದಲ್ಲಿಮಳೆಯಾಗಲಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹೌದು, ರಾಜ್ಯದಲ್ಲಿ ಕ್ಷೀಣಿಸುತ್ತಿರುವ ಮುಂಗಾರು ಜೂನ್ 11 ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಗದಿತ ಅವಧಿಗಿಂತ ಮೊದಲೇ ಕಾಲಿಟ್ಟು ಮುಂಗಾರು ಆರಂಭದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಆದರೆ ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.ಇದೀಗ ಸೋಮಮವಾರದಿಂದ ಮತ್ತೆ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಜೂನ್ 11 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Rain alert do you know ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಜೂನ್ 11 ಕ್ಕೆ ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ ನಿಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ? ಚೆಕ್ ಮಾಡಿ
ಜೂನ್ 12 ರಂದು ಕೊಡಗು, ಚಿಕ್ಕಬಳ್ಳಾಪುರ, ದಾವಣಗೆರೆ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾಜಿಲ್ಲೆಗಳಿಗೆ ಯೆಲ್ಲೋ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?
ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.