Pm kisan date check : ಪಿಎಂ ಕಿಸಾನ್ ಹಣ ಜಮೆಗಾಗಿ ಕಾಯುತ್ತಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ರೈತ ಮಿತ್ರರೇ ಅತೀ ಶೀಘ್ರದಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗಲಿದೆ? ಯಾವಾಗ ಜಮೆಯಾಗಲಿದೆ? ಯಾವ ರಾಜ್ಯದಿಂದ ಪಿಎಂ ಕಿಸಾನ್ ಹಣ ಬಿಡುಗಡೆಯಾಗಲಿದೆ? ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಇದೇ ತಿಂಗಳು ಜುಲೈ 18 ರಂದು ಬಿಹಾರ್ ರಾಜ್ಯದಿಂದ ಹಣ ಬಿಡುಗಡೆಯಾಗಲಿದೆ. ಹೌದು, ಇದೇ ತಿಂಗಳಲ್ಲಿ ಹಣ ಜಮೆಯಾಗಲಿದೆ ಎಂಬುದು ಮಾಧ್ಯಮಗಳ ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ದೇಶಾದ್ಯಂತ 9.8 ಕೋಟಿ ರೈತರ ಖಾತೆಗೆ ಸುಮಾರು 22 ಸಾವಿರ ಕೋಟಿ ರೂಪಾಯಿ ಹಣ ಜಮೆಯಾಗಲಿದೆ.
ಇದನ್ನೂ ಓದಿ Land Khata Download ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕಿಸಾನ್ ಸಮ್ಮಾನ್ ಜಾರಿಗೆ ಬಂದು 6 ವರ್ಷ ಪೂರ್ಣಗೊಂಡಿದೆ
Pm kisan date check ಇಕೆವೈಸಿ ಆದ ರೈತರಿಗೆ ಖಾತೆಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
Pm kisan status ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.
ಒಂದು ವೇಳೆ ನೀವು ಅರ್ಹತೆ ಪಡೆದಿದ್ದರೂ ಪಿಎಂ ಕಿಸಾನ್ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ನೀವು ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿಯಾಗಿ ವಿಚಾರಿಸಬಹುದು. ಹೌದು, ಮಿತ್ರರೇ ಯಾವುದಾದರೂ ದಾಖಲೆ ತಪ್ಪಾಗಿದ್ದರೂ ಸಹ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಬ್ಯಾಂಕ್ ಪಾಸ್ ಬುಕ್ ನಲ್ಲಿ, ಆಧಾರ್ ಕಾರ್ಡ್ ನಲ್ಲಿ ಹಾಗೂ ಜಮೀನಿನ ದಾಖಲೆಯಲ್ಲಿ ಹೆಸರು ಒಂದೇ ರೀತಿಯಿಲ್ಲದಿದ್ದರೂ ಸಹ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ.





