Today onwards rain alert : ರಾಜ್ಯಾದ್ಯಂತ ಇಂದಿನಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಣಾಮವಾಗಿ ಮಳೆ ಹೆಚ್ಚಾಗಿದೆ. ಹಾಗಾಗಿ ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ.
ಕರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಇದೇ 17 ರಿಂದ ಈ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗ ಉಡುಪಿ ಜಿಲ್ಲೆಯಲ್ಲಿ ಕೆಲವು ಕಡೆ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮತ್ತೆ ಭಾನುವಾರದಿಂದ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್ 19 ರ ನಂತರ ಮಳೆ ಮತ್ತೆ ಹೆಚ್ಚಾಗಲಿರುವ ಕಾರಣ ಆರೇಂಜ್ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳುರು, ನಗರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಗದಗ, ಚಾಮರಾಜನಗರ ಜಿಲ್ಲೆಯಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ ನಿಮ್ಮ ಜಮೀನು ಯಾರ ಯಾರ ಹೆಸರಿನೊಂದಿಗೆ ಜಂಟಿಯಲ್ಲಿದೆ? ಇಲ್ಲೇ ಚೆಕ್ ಮಾಡಿ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಒಂದೆರಡು ಕಡೆ ಭಾನುವಾರದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Today onwards rain alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





