ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ, ಬಿಎಡ್ ಪಾಸಾದವರಿಗೆ ಸೆ. 4 ರಂದು ನೇರ ಸಂದರ್ಶನ

Written by Ramlinganna

Published on:

Job fair on September 4th : ಎಸ್ಎಸ್.ಎಲ್.ಸಿ, ಪಿಯುಸಿ, ಪದವಿ, ಹಾಗೂ ಬಿ ಎಡ್ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್.

ಹೌದು, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ  ವತಿಯಿಂದ ಇದೇ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿಯ ಹುಮನಾಬಾದ್ ರಸ್ತೆಯ ಶಹಾ ಹೊಂಡೈ ಶೋರೂಂದಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಮೆಡ್‌ಪ್ಲಸ್‌ದಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ ಡಿ/ಬಿ ಫಾರ್ಮಾ ವಿಥ್ ಪಿಸಿಐ ವಿದ್ಯಾರ್ಹತೆ ಹೊಂದಿರಬೇಕು. ಫಾರ್ಮಾಸಿ ಎಡ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸಿ.ಎಸ್.ಎ. ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಗುರು ದಿಕ್ಷಾ ಅಕಾಡೆಮಿಯಲ್ಲಿ ಶಿಕ್ಷಕ, ಆಪ್ತ ಸಮಾಲೋಚಕ, ಮಾರ್ಕೆಟಿಂಗ್ ಎಕ್ಸಿಕ್ಯೊಟಿವ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಫೀಸ್ ಬಾಯ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು.

ಲಾಹೋಟಿ ಮೋಟರ‍್ಸ್ದಲ್ಲಿ ರಿಲೇಷನ್‌ಶಿಫ್ ಮ್ಯಾನೇಜರ್ ಹಾಗೂ ರಿಷೇಪ್ಶನಿಸ್ಟ್/ ಶೋರೂಮ್ ಹೊಸ್ಟೆಸ್ಸ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.

ಇದನ್ನೂ ಓದಿ : ನಿಮ್ಮ ಹೊಸ Adhaarcard ಇಲ್ಲಿ download ಮಾಡಿ ಮಾಹಿತಿ ಚೆಕ್ ಮಾಡಿ

ಎಸ್.ಡಿ.ಡಿ.ಓ.ಎಮ್ ಚಿಟ್ ಫಂಡ್ ಪ್ರೆöÊ.ಲೀ.ದಲ್ಲಿ ಏಜೆಂಟ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನೇರ ಸಂರ್ದಶನದಲ್ಲಿ ಭಾಗವಹಿಸುವರು. ನೇರ ಸಂರ್ದಶನದಲ್ಲಿಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

Job fair on September 4th  ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಅಧೀನದಲ್ಲಿ ನಡೆಯುತ್ತಿರುವ ಜೇವರ್ಗಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜೇವರ್ಗಿ ಮೊರಾರ್ಜಿ ದೇಸಾಯಿ ಪ.ಪೂ. ವಸತಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಕನ್ನಡ ಭಾಷಾ ಹಾಗೂ ಆಂಗ್ಲ ಭಾಷಾ ಉಪನ್ಯಾಸಕರ ಹುದ್ದೆಗೆ ಎಂ.ಎ., ಬಿ.ಇ.ಡಿ. ವಿದ್ಯಾರ್ಹತೆ ಹೊಂದಿರಬೇಕು.  ಅದೇ ರೀತಿ ಭೌತಶಾಸ್ತç, ರಸಾಯನಶಾಸ್ತ್ರ, ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ಉಪನ್ಯಾಸಕರ ಹುದ್ದೆಗಳಿಗೆ ಎಮ್.ಎಸ್.ಸಿ., ಬಿ.ಇ.ಡಿ. ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ 2025ರ ಸೆಪ್ಟೆಂಬರ್ 6 ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9538988452 ಗೆ ಸಂಪರ್ಕಿಸಲು ಕೋರಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿ: ಆಕ್ಷೇಪಣೆ ಆಹ್ವಾನ

ಕಲಬುರಗಿ ಮಹಾನಗರಪಾಲಿಕೆ 2024-25ನೇ ಸಾಲಿಗಾಗಿ ಶೇ.5 ಯೋಜನೆಯಡಿ 2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತ ನಿಧಿ) ಅನುದಾನದಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಣ್ಣ ಉದ್ದಿಮೆಗಾಗಿ ಸಹಾಯಧನ ಸಲುವಾಗಿ ಅರ್ಜಿ ಆಹ್ವಾನಿಸಿ, ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮಹಾನಗರ ಪಾಲಿಕೆಯ ನೋಟೀಸ್ ಬೋರ್ಡ್ನಲ್ಲಿ ಹಾಗೂ ಮಹಾನಗರ ಪಾಲಿಕೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.

ಈ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ http://www.kalaburagicity.mrc.gov ವೆಬ್‌ಸೈಟ್‌ದಲ್ಲಿ ಸಹ ಈಗಾಗಲೇ ಪ್ರಕಟಿಸಲಾಗಿದೆ.  ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ 2025ರ ಸೆಪ್ಟೆಂಬರ್ 3 ರಿಂದ  17 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Leave a Comment