ಇಂದಿನಿಂದ 3 ದಿನ ಈ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ- ಸಂಪೂರ್ಣ ಮಾಹಿತಿ ಇಲ್ಲಿದೆ

Written by Ramlinganna

Published on:

Heavy rain in 19 district  ಇಂದಿನಿಂದ ಮತ್ತೆ ರಾಜ್ಯದಲ್ಲಿ ಮಳೆಯ ಆರ್ಭಟ ಶುರವಾಗಲಿದೆ. ಹೌದು, ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೆ ಆಗಾಗ ಸುರಿಯುತ್ತಿರುವ ಮಳೆ ಆರ್ಭಟ ಈಗ ಮತ್ತೆ ಹೆಚ್ಚಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂಬುದನ್ನುತಿಳಿದುಕೊಳ್ಳೋಣ ಬನ್ನಿ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯಪುರ, ಗದಗ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ಬೀದರ್ ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರುೂ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ ಹಾಗೂ ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಯಾವ ಕಚೇರಿಗೂ ಹೋಗಬೇಕಿಲ್ಲ. ಒಂದು ಕರೆ ಮಾಡಿದರೆ ಸಾಕು ನಿಮ್ಮ ಊರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಹಾಗೂ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬ ಮಾಹಿತಿ ಕ್ಷಣಮಾತ್ರದಲ್ಲಿ ಸಿಗಲಿದೆ. ಹಾಗಾದರೆ ಯಾವ ನಂಬರಿಗೆ ಕರೆ ಮಾಡಬೇಕು ಎಂಬ ಪ್ರಶ್ನೆ ಮೂಡುತ್ತಿದೆಯೇ? ಇಲ್ಲಿದೆ ನೋಡಿ ಮಾಹಿತಿ.

Heavy rain in 19 district  ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಯಾರಾದರೂ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment