ಮಹಿಳೆಯರಿಗೆ ಗುಡ್ ನ್ಯೂಸ್ 23ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಯಾವಾಗ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

Written by Ramlinganna

Published on:

when Gruhalakshmi amount credit : ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡ್ ನ್ಯೂಸ್ ನೀಡಿದ್ದಾರೆ.

ದಸರಾ ಹಬ್ಬಕ್ಕೆಂದು ಈಗಾಗಲೇ ಈಗಾಗಲೇ ಜುಲೈ ತಿಂಗಳ ಹಣ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು  ತಿಳಿಸಿದ್ದಾರೆ.

ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ರವರು  ರಾಜ್ಯದ 1.24 ಕೋಟಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ 22 ಕಂತುಗಳು ಹಣ ತಲುಪಿಸಿದೆ. ದಸರಾ ಸಂಭ್ರಮಕ್ಕೆ ಅನುಕೂಲವಾಗಲಿ ಎಂದು ಮೂರು ದಿದನ ಹಿಂದೆ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಂದರೆ ಆಗಸ್ಟ್ ತಿಂಗಳ ಕಂತಿನಹಣ ಬಾಕಿ ಇದ್ದು, ಅದನ್ನು ಶೀಘ್ರ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೂರು ದಿನಗಳ ಹಿಂದೆ ಸರ್ಕಾರ ಆರ್ಥಿಕ ಇಲಾಖೆಯಿಂದ ಜಿಲ್ಲಾ ಖಜಾನೆಗಳಿಗೆ ಹಣ ವರ್ಗಾವಣೆಯಾಗಿದೆ. ಜಿಲ್ಲಾವರು ಫಲಾನುಭವಿಗಳ ಒಂದು ಎರಡು ದಿನಗಳ ಅಂತರದಲ್ಲಿ ಖಾತೆಗೆ ಹಣ ಜಮೆಯಾಗಲಿದೆ. ಈ ವಾರಾಂತ್ಯದೊಳಗೆ ಎಲ್ಲಾ ಫಲಾನುಭವಿಗಳಿಗೂ ಹಣ ಸಿಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

when Gruhalakshmi amount credit  ಈವರೆಗೆ ಫಲಾನುಭವಿಗಳಿಗೆ ಸಿಕ್ಕ ಹಣವೆಷ್ಟು ?

ಒಟ್ಟು 23 ಕಂತುಗಳ ಹಣ ಖಾತೆಗೆ ಜಮೆ ಆಗಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ. ಅದರಂತೆ,  ಯೋಜನೆ ಆರಂಭವಾದ ಇಲ್ಲಿಯವರೆಗೂ ಪ್ರತಿ ತಿಂಗಳು 2 ಸಾವಿರದಂತೆ ಪ್ರತಿಯೊಬ್ಬ ಫಲಾನುಭವಿಗೂ 46 ಸಾವಿರ ರೂಪಾಯಿ ಜಮೆ ಆಗಿದೆ.

ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಇದನ್ನೂ ಓದಿ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ.  ರೇಶನ್ ಕಾರ್ಡ್ ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.  ಅರ್ಜಿ ಸಲ್ಲಿಸುವಾಗ ರೇಶನ್ ಕಾರ್ಡ್ ನೊಂದಿಗೆ ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿರುತ್ತದೆ. ತಡೆಹಿಡಿಯಲಾದ ಅಥವಾ ರದ್ದು ಗೊಳಿಸಲಾದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುವುದಿಲ್ಲ.

ಗೃಹಲಕ್ಷ್ಮೀ ಯೋಜನೆ ಕುರಿತಂತೆ ಯಾರಿಗೆ ಸಂಪರ್ಕಿಸಬೇಕು?

ಗೃಹಲಕ್ಷ್ಮೀ ಯೋಜನೆ ಕುರಿತಂತೆ ಹೆಚ್ಚಿನ ಮಾಹಿತಿ ಬೇಕಾದರೆ 080 22279954, 8792662814 ಹಾಗೂ 8792662816 ಗೆ ಸಂಪರ್ಕಿಸಲು ಕೋರಲಾಗಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿದವರಿಗೆ ಮೊದಲ ಕಂತಿನ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಡಿಬಿಟಿ ಆ್ಯಪ್  ತೆರೆದುಕೊಳ್ಳುತ್ತದೆ.  ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ  ಕಂಡಿಶನ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ನಮೂದಿಸಿದ ನಂತರ  ಪಾಸ್ವರ್ಡ್ ನೀವು ಕ್ರಿಯೇಟ್ ಮಾಡಿಕೊಳ್ಳಬೇಕು. ಆಮೇಲೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ಗೃಹಲಕ್ಷ್ಮೀ ಯೋಜನೆಯ ಮೊದಲನೇ ಕಂತಿನ  ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು.

Leave a Comment