Heavy rain call varunamitra number : ಕರ್ನಾಟಕದ ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಉತ್ತರ ಒಳನಾಡಿನಲ್ಲಿ ಅಬ್ಬರವಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಲೆಯಾಗಲಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅಂದರೆ ಸೆಪ್ಟೆಂಬರ್ 28 ಮತ್ತು 29 ರವರೆಗೆಭಾರಿ ಮಳೆಯಾಗಿವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವುದರಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ಕ್ಕೆ ಆರೇಂಜ್ ಅಲರ್ಟ್ ನೀಡಲಾಗಿತ್ತು.
ಇದನ್ನೂ ಓದಿ : PM Kisan ಲಿಸ್ಟ್ ನಲ್ಲಿದ್ದರೂ ಹಣವೇಕೆ ಜಮೆಯಾಗುತ್ತಿಲ್ಲ? ಇಲ್ಲಿದೆ ಮಾಹಿತಿ
ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28 ರಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಂದು ಭಾರಿ ಮಳಯಾಗುವುದರಿಂದ ಈಜಿಲ್ಲೆಗಳಲ್ಲಿ ಅಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಅದೇ ರಪೀತಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಬೇಕೆ?
Heavy rain call varunamitra number ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





