Rain alert in 26 district : ಚಂಡಮಾರುತದ ಪರಿಣಾಮವಾಗಿ ಇಂದಿನಿಂದ ಅಕ್ಟೋಬರ್ 11 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಯಾವ ದಿನಾಂಕದವರೆಗೆ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕದಾದ್ಯಂತ ಅಕ್ಟೋಬರ್ 11 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ, ಕೊಪ್ಪಳ, ತುಮಕೂರು, ವಿಜಯನಗರ, ಶಿವಮೊಗ್ಗ, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಜಿಲ್ಲೆಗಳಲ್ಲಿ ಅಕ್ಟೋಬರ್ 11 ರವರೆಗೆ ಭಾರಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯಾಗದಿದ್ದರೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಇದನ್ನೂ ಓದಿ Pancardಗೆ Aadhaarcard link ಆಗಿದೆಯೇ? ಇಲ್ಲೇ ಚೆಕ್ ಮಾಡಿ
ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಬೇಕೆ?
Rain alert in 26 district ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





