ಸಣ್ಣ ಉದ್ದಿಮೆ ಸ್ಥಾಪಿಸಲು ರೈತರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

subsidy for set up small businesses : ಕಲಬುರಗಿ ಮಹಾನಗರಪಾಲಿಕೆಯ ಶೇ. 24.10  ಅನುಮೋದಿತ ಕ್ರಿಯಾ ಯೋಜನೆ, ಎಸ್.ಎಫ್.ಸಿ (ಮುಕ್ತ ನಿಧಿ)   ಈ ಕೆಳಕಂಡ ಯೋಜನೆಯ ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26 ನೇ ಸಾಲಿಗೆ ಸೌಲಭ್ಯ ಪಡೆಯಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.

2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತ ನಿಧಿ) ಯೋಜನೆಯಡಿ ಪರಿಶಿಷ್ಟ ಪಂಗಡದ ಜನರಿಗೆ ಸಣ್ಣ ಉದ್ದಿಮೆ ಸ್ಥಾಪಿಸಲು ಸಹಾಯಧನ (ಬ್ಯಾಂಕ್ ಮುಖಾಂತರ) ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು  ಪರಿಶಿಷ್ಟ ಪಂಗಡದವರಾಗಿರಬೇಕು. ಕಲಬುರಗಿ ನಗರ ನಿವಾಸಿಯಾಗಿರಬೇಕು. ಈ ಮೊದಲು ಮಹಾನಗರ ಪಾಲಿಕೆಯಿಂದ ಅಥವಾ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ  ಪಡೆದವರು ಪುನಃ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಶಾಖೆಯಿಂದ ಹಾಗೂ ಆವಕ ಶಾಖೆಯಿಂದ ಕಚೇರಿ ಸಮಯದಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ದೃಢೀಕರಣದೊಂದಿಗೆ 2025ರ ಅಕ್ಟೋಬರ್ 31ರ ಸಂಜೆ 4.30 ಗಂಟೆಯೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಶಾಖೆಯನ್ನು ಹಾಗೂ ಪಾಲಿಕೆಯ

http://www.kalaburagicity.mrc.gov

ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.

subsidy for set up small businesses ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಪ್ರಸಕ್ತ 2025-26ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ “ಕುರಿ ಮತ್ತು ಮೇಕೆ ಸಾಕಾಣಿಕೆ ಲಾಭದಾಯಕ ಉದ್ಯಮಕ್ಕೆ ದಾರಿ” ಕುರಿತು ಇದೇ ಅಕ್ಟೋಬರ್ 14 ರಿಂದ 16 ರವರೆಗೆ ಮೂರು ದಿನಗಳ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ ನರೇಗಾ job card ನಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿರುವ ಪರಿಶಿಷ್ಟ ಪಂಗಡದ  ರೈತರು ಸಹಾಯಕ ಕೃಷಿ ನಿರ್ದೇಶಕರು (ರೈ.ಮ.)  ನೀಲಕ್ಕಾ ನರಸಲಗಿ-9845350226 ಹಾಗೂ ಕೃಷಿ ಅಧಿಕಾರಿ ಪ್ರಿಯಾಂಕ ಇವರ ಮೊಬೈಲ್ ಸಂಖ್ಯೆ-8277935625ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಈ ತರಬೇತಿಯು ಪರಿಶಿಷ್ಟ ಪಂಗಡದ 50 ಜನ ಅಭ್ಯರ್ಥಿಗಳಿಗೆ ಮಾತ್ರ ಮಾಡಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ಕೊಡಲಾಗುತ್ತದೆ. ಎಫ್.ಐ.ಡಿ. ಹೊಂದಿರುವ ಆಸಕ್ತ ಪರಿಶಿಷ್ಠ ಪಂಗಡದ  ರೈತರು ತಮ್ಮ ನೊಂದಾಯಿಸಿಕೊಳ್ಳಬೇಕು ಹಾಗೂ ಎಫ್.ಐ.ಡಿ. ಆಧಾರ ಸಂಖ್ಯೆ ಹಾಗೂ ಮೊ.ನಂ ಕಡ್ಡಾಯವಾಗಿ ತರಬೇಕೆಂದು ಅವರು ತಿಳಿಸಿದ್ದಾರೆ.

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿರುವ ಕಲಬುರಗಿಯ ಪರಿಶಿಷ್ಟ ಜಾತಿಯ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ 2025ರ ಅಕ್ಟೋಬರ್ 13 ರಿಂದ 24 ರವರೆಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಆಸಕ್ತಿಯುಳ್ಳ ವಯೋಮಿತಿ 20 ರಿಂದ 45 ವರ್ಷದೊಳಗಿನ, ಕನಿಷ್ಠ  ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾದ  ಪರಿಶಿಷ್ಟ ಜಾತಿಯ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಆಧಾರ ಕಾರ್ಡ್, ರೇಷನ್ ಕಾರ್ಡ, ಜಾತಿ ಪ್ರಮಾಣಪತ್ರ ಪ್ರತಿ, ಹಾಗೂ ಇತ್ತೀಚಿನ 3 ಭಾವಚಿತ್ರ, ವಿದ್ಯಾಭ್ಯಾಸದ ಅಂಕಪಟ್ಟಿ ಪ್ರತಿ ಮತ್ತು ಇತರೆ ಸಂಬAಧಪಟ್ಟ ದಾಖಲೆಗಳೊಂದಿಗೆ 2025ರ ಅಕ್ಟೋಬರ್ 9 ರೊಳಗಾಗಿ ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅಥವಾ ಮೊಬೈಲ್  ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಅಕ್ಟೋಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ನಿರ್ದೇಶಕರು, ಸಿಡಾಕ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ವಿಭಾಗೀಯ ಕಛೇರಿ) ಸಿಓಇ ಕಟ್ಟಡ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ಇಲ್ಲಿ ನಡೆಯುವ  ಸಂದರ್ಶನಕ್ಕೆ ಹಾಜರಾಗಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿಯನ್ನು ಹಾಗೂ  ಮೋಬೈಲ್  8884872109 / 9108972833 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment