Good news to farmers here : ಕಳೆದ ಮುಂಗಾಗು ಹಂಗಾಮಿನಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ದೊಡ್ಡ ರಿಲೀಫ್ ನೀಡಿದ್ದು, ನಿಗದಿತ ಪ್ರಮಾಣಕ್ಕಿಂತ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ಹೆಚ್ಚುವರಿ ಇನ್ಪುಟ್ ಸಬ್ಸಿಡಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.
ಮುಂಗಾರಿನಲ್ಲಿ ರಾಜ್ಯದಲ್ಲಿ 12.82 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ನಷ್ಟಕ್ಕೆ ಎನ್.ಡಿ.ಆರ್.ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ) ಮತ್ತು ಎಸ್.ಡಿ.ಆರ್.ಎಫ್ (ರಾಜ್ಯ ವಿಪತ್ತು ನಿರ್ವಹಣಾ ಕಾಯಿದೆ) ಮಾರ್ಗಸೂಚಿಗಿಂತ ಅಧಿಕ ಮೊತ್ತದ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.
ಇದನ್ನೂ ಓದಿ : ನಿಮ್ಮ ಜಮೀನು ಈ ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ
ಎರಡು ಹೆಕ್ಟೇರಿಗೆ ಸೀಮಿತವಾಗಿ ಇನ್ಪುಟ್ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರಿಗೆ ನಿಗದಿಯಾಗಿದ್ದ 8500 ರೂಪಾಯಿ ಬದಲಿಗೆ 17 ಸಾವಿರ ರೂಪಾಯಿ ಪರಿಹಾರವನ್ನು ನಿಗದಿ ಮಾಡಲಾಗಿದೆ. ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರಿಗೆ ನಿಗದಿಯಾಗಿರುವ 17 ಸಾವಿರ ರೂಪಾಯಿ ಬದಲಿಗೆ 25 ಸಾವಿರ ರೂಪಾಯಿ ಬಹುವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ ನಿಗದಿಯಾಗಿದ್ದ 22500 ರೂಪಾಯಿ ಬದಲಿಗೆ 31 ಸಾವಿರ ರೂಪಾಯಿ ಪರಿಹಾರ ವಿತರಣೆಗೆ ತೀರ್ಮಾನಿಸಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಳೆ ಹಾನಿ ನಷ್ಟ ಪರಿಹಾರ ಎನ್.ಡಿ.ಆರ್.ಎಫ್ ಮಾನದಂಡ ಹೆಚ್ಚ ಮಾಡುವಂತೆ ಒತ್ತಾಯ ಕೇಳಿ ಬಂದಿತ್ತು. ಪ್ರವಾಹ, ಹಾನಿ, ಪ್ರಕೃತಿ ಹಾನಿ, ಪ್ರಕೃತಿ ವಿಕೋಪ, ಬೆಳೆ ನಷ್ಟದ ಪರಿಹಾರ, ಎನ್.ಡಿ.ಆರ್.ಎಫ್ ಮಾನದಂಡ ಕಳೆದ ಎಂಟು ವರ್ಷಗಳಿಂದ ವೈಜ್ಞಾನಿಕವಾಗಿ ಪುನರ್ ಪರಿಶೀಲನೆ ಆಗಿಲ್ಲ ಎಂದು ರೈತ ಸಂಘದವರು ಹೇಳಿದ್ದರು. ಇದಾದ ಬೆನ್ನಲ್ಲೆ ರಾಜ್ಯ ಸರ್ಕಾರ ಭಾರಿ ಮಳೆ ಮತ್ತು ಪ್ರವಾಹದಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ರಿಲೀಫ್ ನೀಡಿದೆ.
Good news to farmers here ಸಣ್ಣ ಉದ್ದಿಮೆ ಸ್ಥಾಪಿಸಲು ರೈತರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಕಲಬುರಗಿ ಮಹಾನಗರಪಾಲಿಕೆಯ ಶೇ. 24.10 ಅನುಮೋದಿತ ಕ್ರಿಯಾ ಯೋಜನೆ, ಎಸ್.ಎಫ್.ಸಿ (ಮುಕ್ತ ನಿಧಿ) ಈ ಕೆಳಕಂಡ ಯೋಜನೆಯ ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26 ನೇ ಸಾಲಿಗೆ ಸೌಲಭ್ಯ ಪಡೆಯಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.
2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತ ನಿಧಿ) ಯೋಜನೆಯಡಿ ಪರಿಶಿಷ್ಟ ಪಂಗಡದ ಜನರಿಗೆ ಸಣ್ಣ ಉದ್ದಿಮೆ ಸ್ಥಾಪಿಸಲು ಸಹಾಯಧನ (ಬ್ಯಾಂಕ್ ಮುಖಾಂತರ) ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಪರಿಶಿಷ್ಟ ಪಂಗಡದವರಾಗಿರಬೇಕು. ಕಲಬುರಗಿ ನಗರ ನಿವಾಸಿಯಾಗಿರಬೇಕು. ಈ ಮೊದಲು ಮಹಾನಗರ ಪಾಲಿಕೆಯಿಂದ ಅಥವಾ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ ಪಡೆದವರು ಪುನಃ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಶಾಖೆಯಿಂದ ಹಾಗೂ ಆವಕ ಶಾಖೆಯಿಂದ ಕಚೇರಿ ಸಮಯದಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ದೃಢೀಕರಣದೊಂದಿಗೆ 2025ರ ಅಕ್ಟೋಬರ್ 31ರ ಸಂಜೆ 4.30 ಗಂಟೆಯೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಶಾಖೆಯನ್ನು ಹಾಗೂ ಪಾಲಿಕೆಯ http://www.kalaburagicity.mrc.gov
ವೆಬ್ಸೈಟ್ನ್ನು ಸಂಪರ್ಕಿಸಲು ಕೋರಲಾಗಿದೆ.





