One week rain alert here : ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಸೋಮವಾರದಿಂದ ಒಂದು ವಾರ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
One week rain alert here ಮೀನುಗಾರರಿಗೆ ಎಚ್ಚರಿಕೆ
ಸೋಮವಾರದಿಂದ ಗುರುವಾರದವರೆಗೂ ಕರಾವಳಿಯ ಉದ್ದಕ್ಕೂ ಗಂಟೆಗೆ 35 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯೆತೆಯಿದೆ. ಆದ್ದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ ರೈತರಿಗೆ ಸಿಹಿ ಸುದ್ದಿ: ಬೆಳೆ ಹಾನಿ ಪರಿಹಾರ ನೀಡಲು ಒಪ್ಪಿಗೆ ಯಾರಿಗೆಷ್ಟು ಪರಿಹಾರ ಇಲ್ಲಿದೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಕೆಲವೆಡೆ ಇದೇ 26 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳನ್ನು ಮಳೆ ವ್ಯಾಪಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
One week rain alert here ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
One week rain alert here ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ನಿಮ್ಮ ಮೊಬೈಲ್ ನಲ್ಲಿ ಒಂದು ಸಲ ಆ್ಯಪ್ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮಾಹಿತಿ ಪಡೆಯಬಹುದು.





