ಉಚಿತವಾಗಿ ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Free goat sheep farming training : ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ  ಈ ಕೆಳಕಂಡ ವಿವಿಧ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

Free goat sheep farming training ಕುರಿ ಮೇಕೆಯೊಂದಿಗೆ ಏನೇನು ತರಬೇತಿ ನೀಡಲಾಗುವುದು

ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕೆ ಮತ್ತು  ಎರೆಹುಳ ಗೊಬ್ಬರ ತಯಾರಿಕೆ) ತರಬೇತಿಗೆ ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದೆ. ಸಿಸಿಟಿವಿ ಕ್ಯಾಮೆರಾ, ಸೆಕ್ಯೂರಿಟಿ ಅಲಾರ್ಮ್ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ಮತ್ತು ಸೇವೆ ತರಬೇತಿ ಪಡೆಯಲು ಅರ್ಜಿ ಸಲ್ಲಿಕೆಗೆ ನವೆÀಂಬರ್ 14 ಕೊನೆಯ ದಿನವಾಗಿದೆ.  ವಸ್ತç ಚಿತ್ರಕಲಾ ಉದ್ಯಮ (ಕಸೂತಿ ಮತ್ತು ಬಟ್ಟೆಯ ಚಿತ್ರಕಲೆ) ತರಬೇತಿಗೆ ಅರ್ಜಿ ಸಲ್ಲಿಸಲು ನವೆಂಬರ್ 21 ರಂದು ಕೊನೆಯ ದಿನವಾಗಿದೆ.

ನವೆಂಬರ್ 5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ:–ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (ಖಚಿಠಿiಜ ಖoತಿiಟಿg Suಡಿveಥಿ) ಕಾರ್ಯವನ್ನು ನವೆಂಬರ್  5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಇಂದು ಕಲಬುರಗಿ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು  ಮಾತನಾಡಿ, ತೊಗರಿ, ಹತ್ತಿ, ಕಬ್ಬು ಹಾಗೂ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕಡಲೆ, ಜೋಳ ಹಾಗೂ ಇತರೆ ವಿವಿಧ ಬೆಳೆಗಳಲ್ಲಿ ಬರಬಹುದಾದ ಕೀಟ, ರೋಗ ಹಾಗೂ ಇತರ ಪೀಡೆಗಳ ಜಂಟಿ ಸರ್ವೆಕ್ಷಣೆಗಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿಗಳ ಒಳಗೊಂಡ 7 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಬುಧುವಾರದಂದು 7 ತಂಡಗಳಲ್ಲಿಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ 11 ತಾಲೂಕುಗಳ ವಿವಿಧ ಗ್ರಾಮಗಳಲ್ಲಿನ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ಕೀಟ ಹಾಗೂ ರೋಗ ಸಮೀಕ್ಷೆ ಮಾಡಿ ತೆಗೆದುಕೊಳ್ಳಬಹುದಾದ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ ಈ ರೈತರ ಖಾತೆಗೆ 15 ದಿನದಲ್ಲಿ ಬೆಳೆ ಪರಿಹಾರ ಬಿಡುಗಡೆ-ಇಲ್ಲಿದೆ ಮಾಹಿತಿ

ಪ್ರತಿ ಗುರುವಾರದಂದು ಎಂಟು ವಾರದವರೆಗೆ ರೇಡಿಯೋ (ಂಟಟ Iಟಿಜiಚಿ ಖಚಿಜio) ಮುಖಾಂತರ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರೊಂದಿಗೆ ವಿವಿಧ ಬೆಳೆಗಳಿಗೆ ಬರಬಹುದಾದ ಕೀಟ, ರೋಗ ಹಾಗೂ ಇತರ ವಿಷಯಗಳ ಕುರಿತು ಸಂವಾದ ನಡೆಸಲಿದ್ದಾರೆ.

ಸಭೆಯಲ್ಲಿ ಸಹಾಯಕ ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದೊಡ್ಡಮನಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ರಾಜು ತೇಗ್ಗೆಳ್ಳಿ, ಕಲಬುರಗಿ ಮತ್ತು ಸೇಡಂ ಉಪ ಕೃಷಿ ನಿರ್ದೇಶಕರು,  ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು.

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‌ಜಿಎನ್‌ಆರ್‌ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿAದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ  ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ  ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900135705,  7019939996, 9901098123 ಹಾಗೂ 9901694389 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment