Crop insurance money credit soon : ಪ್ರಸಕ್ತ 2025-26ನೇ ಸಾಲಿನಲ್ಲಿ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳ ಪೈಕಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಸರ್ಕಾರ ಆದೇಶಿಸಿದ್ದು, ಅತೀ ಶೀಘ್ರದಲ್ಲಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ 11,727.5 ಹೆಕ್ಟೇರ್ ಹತ್ತಿ, 822.46 ಹೆಕ್ಟೇರ್ ಉಳ್ಳಾಗಡ್ಡಿ, 3,22,734 ಹೆಕ್ಟೇರ್ ತೊಗರಿ, 392.08 ಸೂರ್ಯಕಾಂತಿ ಹಾಗೂ 192.61 ಆರಿಶಿಣ ಸೇರಿದಂತೆ ಒಟ್ಟಾರೆ 3,35,868.7 ಹೆಕ್ಟೇರ್ ಪ್ರದೇಶದ ಬೆಳೆಗಳು ಹಾನಿಯಾಗಿದೆ ಎಂದು 2,68,699 ರೈತರಿಂದ ದೂರು ಸ್ವೀಕೃತವಾದ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಗೆ ಸಲ್ಲಿಸಲಾದ ಜಿಲ್ಲಾಡಳಿತ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೆ ಈ ರೈತರ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ.
ಇನ್ನುಳಿದಂತೆ ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ದೂರು ನೀಡಿದ 22,385 ರೈತರಿಗೆ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ((Localized calamity) ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಳೆ ವಿಮೆ ಅರ್ಜಿ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸ್ ನ್ನು ಅಂದರೆ ಬೆಳೆ ವಿಮೆ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
Crop insurance money credit soon ಬೆಳೆ ವಿಮೆ ಅರ್ಜಿ ಸ್ಟೇಟಸ್ ಹೀಗೆ ಚಕ್ ಮಾಡಿ
ಬೆಳೆ ವಿಮೆ ಅರ್ಜಿಯ ಸ್ಟೇಟಸನ್ನು ಚೆಕ್ ಮಾಡಲು ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಂರಕ್ಷಣೆ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಋತು ಆಯ್ಕೆಯಲ್ಲಿ Khariff ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ check status ಮೇಲೆ ಕ್ಲಿಕ್ ಮಾಡಬೇಕು. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡನ್ನು ನಮೂದಿಸಿರಬೇಕು. ಇದಾದ ನಂತರ Search ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಡಿ ತಿಂಗಳಿಗೆ 3 ಸಾವಿರ ಪೆನ್ಶನ್ ಸಿಗಲಿದೆ ಇಲ್ಲಿದೆ ಮಾಹಿತಿ
ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಪ್ರೊಪೋಸನ್ ಸಂಖ್ಯೆ, ಮೊಬೈಲ್ ನಂಬರ್ ಕೊನೆಯ ಮೂರು ಅಂಕೆಗಳು ನಿಮ್ಮ ಹೆಸರು ಕಾಣಿಸುತ್ತದೆ. ಅದರ ಮುಂದೆ ಬ್ಯಾಂಕಿನಿಂದ ಅನುಮೋದಿಸಿದೆ ಮತ್ತು ವಿಮಾ ಕಂಪನಿಗೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು. ಇದಾದನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.ನೀವು ಯಾವ ದಿನಾಂಕದಂದು ವಿಮೆ ಹಣ ಕಟ್ಟಿದ್ದೀರಿ. ಡಾಟಾ ಎಂಟ್ರಿ ಕಂಪ್ಲಿಟ್ ಆಗಿದೆಯೋ ಎಂಬ ಮಾಹಿತಿ ಕಾಣಿಸುತ್ತದೆ. ಅಂದರೆ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೆಂದರ್ಥ. ಅತೀ ಶೀಘ್ರದಲ್ಲಿ ಅರ್ಜಿಯ ಸ್ಟೇಟಸ್ ಕಾಣಿಸಲಿದೆ. ಇದನ್ನು ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಇಲ್ಲದೆ ಇಲ್ಲಿ ತಿಳಿಸಿದ ಮಾಹಿತಿಯಂತೆ ಚೆಕ್ ಮಾಡಿಕೊಳ್ಳಬಹುದು.





