ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ- ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

Written by Ramlinganna

Published on:

Rain alert check here: ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು, ಗದಗ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಕೊಪ್ಪಳ ಹಾಗೂ ಚಿದ್ರದುರ್ಗ  ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಿತ್ವಾ ಚಂಡಮಾರುತದ ಪರಿಣಾಮ ಮುಂದಿನ ಐದು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ರಾಮನಗರ, ದಾವಣಗೆರೆ, ಮಂಡ್ಯ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಡಿಸೆಂಬರ್ 2 ರಂದು ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 3 ರಂದು ಹಾಸನ, ವಿಜಯನಗರ ಜಿಲ್ಲೆಗಳು ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಮಳೆಯಾಗಬಹುದು. ಇದೇ ರೀತಿ ಡಿಸೆಂಬರ್ 6 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಅತಿವೃಷ್ಠಿಯಿಂದ ಬೆಳೆ ಹಾನಿ: ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಪ್ರಕ್ರಿಯೆಗೆ ಸಿ.ಎಂ. ಸಿದ್ದರಾಮಯ್ಯ ಚಾಲನೆ

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಡಿಸೆಂಬರ್ 4 ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಡಿಸೆಂಬರ್ 2 ರಿಂದ ಮೂರು ದಿನ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 3 ರಂದು ಈ ಜಿಲ್ಲೆಗಳೊಂದಿಗೆ ಹಾವೇರಿಯಲ್ಲಿ ಮಳೆಯಾಗಲಿದೆ. ಡಿಸೆಂಬರ್ 4 ರಂದು ಕಲಬುರಗಿ, ಬೀದರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ.

Rain alert check here ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment