ಮಹಿಳೆಯರ ಖಾತೆಗೆ 52,416 ಕೋಟಿ ರೂಪಾಯಿ ಗೃಹಲಕ್ಷ್ಮೀ ಹಣ ಜಮೆ

Written by Ramlinganna

Published on:

Gruhalakshmi money credit ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ರಾಜ್ಯಾದ್ಯಂತ 1,28,59,073 ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 1,24,12,543 ಫಲಾನುಭವಿಗಳಿಗೆ 52,416.17 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯ ದಿನೇಶ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡ 1,24,12,543 ಫಲಾನುಭವಿಗಳಿಗೆ 22 ಕಂತುಗಳಲ್ಲಿ ಒಟ್ಟು 44 ಸಾವಿರ ರೂಪಾಯಿಗಳನ್ನು ಪಾವತಿ ಮಾಡಲಾಗಿದೆ. ನೋಂದಾಯಿಸಿದ ಫಲಾನುಭವಿಗಳಿ ಪೈಕಿ 1,44,056 ಮಂದಿ ಮರಣ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Gruhalakshmi money credit ಗೃಹಲಕ್ಷ್ಮೀ ಹಣ ನಿಮಗೆ ಜಮೆಯಾಗಿದೆಯೇ  ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳು ನಿಮಗೆ ಸಿಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN&pli=1

ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಡಿಬಿಟಿ ಯಾಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ನೀವು ನೀಡಿದ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ಲಾಗಿನ್ ಆಗಬೇಕು. ನಂತರ ನೀವು ಸರ್ಕಾರದ ವಿವಿಧ ಯೋಜನೆಗಳಿಂದ ನಿಮಗೆ ಹಣ ಜಮೆಯಾಗಿರುವ ಸ್ಥಿತಿಯನ್ನು (ಸ್ಟೇಟಸನ್ನು) ಚೆಕ್ ಮಾಡಬಹುದು.

ಸರ್ಕಾರದ ಬದ್ಧತೆ

ಗೃಹಲಕ್ಷ್ಮೀ ಯೋಜನೆಗೆ ದಾಖಲೆ ಸಂಖ್ಯೆಯಲ್ಲಿ ಮಹಿಳೆಯರು ನೋಂದಾಯಿಸಿಕೊಂಡಿರುವುದು ಸರ್ಕಾರದ ಜನಪರ ಬದ್ಧತೆಯನ್ನು ತೋರಿಸುತ್ತದೆ. ಸಣ್ಣ ಅವಧಿಯಲ್ಲಿಯೇ 1.24 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಹಣ ಸಂದಾಯ ಮಾಡಿರುವುದು ಪ್ರಶಂಸನೀಯ. ಈ ಯೋಜನೆಯಿಂದ ರಾಜ್ಯದ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣೆಗೊಳ್ಳಲು ದೊಡ್ಡ ಮಟ್ಟದ ಕೊಡುಗೆ ಸಿಕ್ಕಿದೆ. ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆಯಾಗುತ್ತಿರುವುದು ಯೋಜನೆಗೆ ಪಾರದರ್ಶಕತೆಯನ್ನು ತಂದಿದೆ ಎಂದು ದಿನೇಶ ಗೂಳಿಗೌಡ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಏನು ಮಾಡಬೇಕು?

ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿಲ್ಲವಾದರೆ ನೀವು ಸ್ಥಳೀಯ ಸಿಡಿಪಿಒ ಕಚೇರಿಗೆ ಭೇಟಿ ನೀಡಬೇಕು. ಅಲ್ಲಿ ಹೋಗುವಾಗ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಶನ್ ಕಾರ್ಡ್, ಆಧಾರ್ ಲಿಂಕ್ ಮಾಡಿದ ಮೊಬೈಲ್ ನಂಬರ್ ತೆಗದುಕೊಂಡು ಹೋಗಬೇಕಾಗುತ್ತದೆ. ಒಂದು ವೇಳೆ ಎನ್.ಪಿ.ಸಿ.ಐ ಫೇಲಿಯರ್ ಅಥವಾ ಇಕೆವೈಸಿ ಫೆಲಿಯರ್ ಆಗಿದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿಲ್ಲ. ಅಥವಾ ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆಯಿದಿದ್ದರೂ ಸಹ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

ಇದನ್ನೂ ಓದಿ ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಯಾರಾದರೂ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ 08022279954, 8792662814 ಅಥವಾ 8792662816 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ವಿಚಾರಿಸಿಕೊಳ್ಳಬಹುದು.

Gruhalakshmi money credit ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದಿದ್ದೀರೋ ಇಲ್ಲವೋ ಚೆಕ್ ಮಾಡಿಕೊಳ್ಳಿ

ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ನೀವು ಆ ಯೋಜನೆಗೆ ಅರ್ಹತೆ ಪಡೆದಿದ್ದಿರೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಹೌದು, ಈ ಯೋಜನೆ ಸೌಲಭ್ಯ ಪಡೆಯಬೇಕಾದರೆ ನಿಮ್ಮಲ್ಲಿ ಬಿಪಿಎಲ್ ಕಾರ್ಡ್ ಇರಬೇಕು.ನಿಮ್ಮ ಕುಟುಂಬದಲ್ಲಿ ಯಾರಿಗೂ ಸರ್ಕಾರಿ ನೌಕರಿ ಇರಬಾರದು. ಇದರೊಂದಿಗೆ ನಿಮ್ಮ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ನಲ್ಲಿ ಒಂದೇ ರೀತಿ ಹೆಸರು ಇರಬೇಕು. ಹೆಸರು ವ್ಯತ್ಯಾಸವಿದ್ದರೆ ಸರ್ಕಾರದ ಸೌಲಭ್ಯ ಜಮಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

Leave a Comment