ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Updated on:

Crop insurance status check here: ಬೆಳೆ ವಿಮೆ ಮಾಡಿಸಿದ ರೈತರು ತಮಗೆಷ್ಟು ಹಣ ಜಮೆಯಾಗಿದೆ ಅಥವಾ ಜಮೆಯಾಗುತ್ತದೆ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿಯ ಸ್ಥಿತಿ ಅಂದರೆ ಸ್ಟೇಟಸ್ ತಿಳಿದುಕೊಳ್ಳಬಹುದು. ಹೌದು,  ಇದರಿಂದಾಗಿ ರೈತರು ತಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗುತ್ತದೆ ಇದರೊಂದಿಗೆ ತಮಗೆಷ್ಟು ಹಮ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

Crop insurance status check here : ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಪೇಜ್ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ವರ್ಷ 2025-2025ರ ಕೆಳಗಡೆ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಕಳೆದ ವರ್ಷದ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬೇಕಾದರೆ 2024-2025 ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬೇಕಾದರೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ಹಿಂಗಾರು ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಬೇಕಾದರೆ ರಾಬಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ನಿಮ್ಮೂರಿನಲ್ಲಿ ಯಾವ ರೈತರಿಗೆಷ್ಟು ಬೆಳೆ ಪರಿಹಾರ ಜಮೆ ಮೊಬೈಲ್ ನಲ್ಲೇ ಚೆಕ್ ಮಾಡಿ

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು  Check status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Captha ಕೋಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು ಕಾಣಿಸುತ್ತದೆ. ಅದರ ಮುಂದೆ ನೀವು ಅರ್ಜಿ ಎಲ್ಲಿ ಸಲ್ಲಿಸಿದ್ದೀರಿ ಎಂಬ ಮಾಹಿತಿ ಕಾಣಿಸುತ್ತದೆ. ಅದಾದನಂತರ ಅಲ್ಲಿ ಕಾಣುವ Select ಮೇಲೆ ಕ್ಲಿಕ್ ಮಾಡಬೇಕು.

Crop insurance status check here ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಿ

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಅಥವಾ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಮಾಹಿತಿ ಕಾಣಿಸುತ್ತದೆ.

View Details ಮೇಲೆ ಕ್ಲಿಕ್ ಮಾಡಬೇಕು. ಆಗ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು ನಿಮ್ಮ ಊರು ಕಾಣಿಸುತ್ತದೆ. ಅಲ್ಲಿ ಹೋಬಳಿ, ನಿಮ್ಮ ಊರು ಸರ್ವೆ ನಂಬರ್, ಹಿಸ್ಸಾ ನಬರ್ ಕಾಣುಸುತ್ತದೆ. ನೀವು ಯಾವ ಬೆಳೆ ಹಾಕಿದ್ದೀರಿ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದೆ ನಿಮಗೆ ಬೆಳೆ ವಿಮೆ ಹಣ ಎಷ್ಟು ಹಣ ಜಮೆಯಾಗುತ್ತದೆ ಎಂಬ ಮಾಹಿತಿ ಕಾಣಿಸುತ್ತದೆ. ನೀವು ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರಿ ಎಂಬ ಮಾಹಿತಿಯೂ ಕಾಣಿಸುತ್ತದೆ.

ಪ್ರಸಕ್ತ ಸಾಲಿನಲ್ಲಿ ರೈತರು ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ಮಾಡಿಸಿದವರು ಹಾಗೂ ಕಳೆದ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರೂ ಸಹ ತಮ್ಮ ಬೆಳೆ ವಿಮೆಯ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಹೌದು, ಮಿತ್ರರೇ ಈ ಮಾಹಿತಿ ಚೆಕ್ ಮಾಡಲು ನಿಮ್ಮ ಬಳಿ ಮೊಬೈಲ್ ಇದ್ದರೆ ಸಾಕು, ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

Leave a Comment