SSLC exam postponed ಜೂನ್ 21 ರಿಂದ ನಿಗದಿಯಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ (SSLC exam postponed) ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಶ ಶಿಕ್ಷಣ ಸಚಿವ ಸುರೇಶ ಕುಮಾರ ತಿಳಿಸಿದ್ದಾರೆ.
ಹೌದು ಕರ್ನಾಟಕದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್-19 ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಿಕೆ
ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಕೊರೊನಾ ಎರಡನೇ ಅಲೆಯಿಂದಾಗಿ ಶಿಕ್ಷಣ ವ್ಯವಸ್ಥೆಯೇ ಹದಗೆಟ್ಟಿದ್ದು, ಕುಸಿಯುವಂತಾಗಿದೆ. ಈಗಾಗಲೇ ಹಲವು ಶಿಕ್ಷಕರು ಸೋಂಕಿಗೆ ತುತ್ತಾಗಿದ್ದಾರೆ. ಈ ಶಿಕ್ಷಕರೆಲ್ಲ ಕರ್ತವ್ಯದಿಂದ ದೂಗಾರಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಆದ್ದರಿಂದ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಬರುವವರೆಗೆ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಖಾಸಗಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಶಿಕ್ಷಣ ಸಚಿವ ಎಸ್ ಸುರೇಶ್ಕುಮಾರ್ರಲ್ಲಿ ಇತ್ತೀಚೆಗೆ ಮನವಿ ಮಾಡಿತ್ತು. ಮಂಡಳಿಯ ಮನವಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಶಿಕ್ಷಣ ಸಚಿವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ದೇಶಾದ್ಯಂತ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದರಿಂದ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಯುವ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಜುಲೈ ತಿಂಗಳಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆಗಳನ್ನು ಸಹ ಮುಂದೂಡಲಾಯಿತು. ಆಗಸ್ಟ್ ತಿಂಗಳಲ್ಲಿ ಈ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ Election Voter list ನಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿಕೊಳ್ಳಿ
ಜೂನ್ 27 ರಂದು ನಡೆಯಬೇಕಿದ್ದ ಯುಪಿಎಸ್ಸಿ ಪರೀಕ್ಷೆಗಳನ್ನು ಸಹ ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು (.ಯುಪಿಎಸ್ಸಿ) ಜೂನ್ 27 ರಂದು ನಡೆಸಲು ಉದ್ದೇಶಿಸಿದ್ದ ನಾಗರಿಕ ಸೇವೆಗಳ ಪ್ರಾಥಮಿಕ (ಪ್ರಿಲಿಮನರಿ) ಪರೀಕ್ಷೆಗಳನ್ನು ಕೋವಿಡ್ ಕಾರಣಕ್ಕೆ ಮುಂದೂಡಿ ಅಕ್ಟೋಬರ್ 10 ರಂದು ನಡೆಸಲಿದೆ.
ಆಗಸ್ಟ್ 6 ರಂದು ಬೃಹತ್ ಉದ್ಯೋಗ ಮೇಳ
ಕಾರವಾರ ಜಿಲ್ಲೆಯ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಗಸ್ಟ್ 6 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಪ್ರಾಚಾರ್ಯ ಡಾ. ಕೇಶವ ಕೆ.ಜಿ. ತಿಳಿಸಿದ್ದಾರೆ.
ಅವರು ನಗರದಲ್ಲಿ ಸೋಮವಾರ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 9ರಿಂದ ಸಾಯಂಕಾಲ 5ರವರೆಗೆ ಸಂದರ್ಶನ ನಡೆಯಲಿದೆ. ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೋಮಾ ಒಳಗೊಂಡು ಎಲ್ಲಾ ರೀತಿಯ ವಿದ್ಯಾರ್ಹತೆ ಇದ್ದವರು ಪಾಲ್ಗೊಳ್ಳಬಹುದಾಗಿದೆ. ಸ್ವ ವಿವರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ ತರಬೇಕು.
ಹೆಸರು ನೋಂದಾಯಿಸಲು 8884461669, 8884461670 ದೂರವಾಣಿಗೆ ಕರೆ ಮಾಡಬಹುದು ಅಥವಾ ಸಂದರ್ಶನದ ದಿನವೇ ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಕೂಡಾ ಅವಕಾಶವಿದೆ ಎಂದು ತಿಳಿಸಿದರು.