ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ತಿಂಗಳಿಗೆ 3 ಸಾವಿರ ಹೀಗೆ ಸಿಗಲಿದೆ

Written by Ramlinganna

Published on:

PMkisan mandhan yojana benefit : ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಪಿಂಚಣಿ ಸಿಗುತ್ತದೆ. ಅಂದರೆ ವರ್ಷಕ್ಕೆ  36 ಸಾವಿರ ರೂಪಾಯಿ ಪಡೆಯಬಹುದು. ಈ ಪಿಂಚಣಿಗಾಗಿ ರೈತರು ತಮ್ಮ ವಯಸ್ಸಿನ ಪ್ರಕಾರ ಪ್ರತಿ ತಿಂಗಳು ಈ ಯೋಜನೆಯಲ್ಲಿ ಹಣವನ್ನು ಠೇವಣಿ ಮಾಡಬೇಕು.  ಹೌದು, ಕೇಂದ್ರ ಸರ್ಕಾರವು ಜಾರಿಗೆ ತಂದ ಈ ಯೋಜನೆಯಿಂದರೈತರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಪೆನ್ಶನ್ ದೊರೆಯಲಿದೆ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

ಪಿಎಂ ಕಿಸಾನ್ ಮಾನಧನ್ ಯೋಜನೆ ಅಡಿಯಲ್ಲಿ ಎರಡು ಹೆಕ್ಟೇರ್ ವರೆಗೆ ಜಮೀನು ಹೊಂದಿರುವ ರೈತರು  18 ರಿಂದ 40 ವಯೋಮಾನದೊಳಗಿರನವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಹ ರೈತರು ಪ್ರತಿ ತಿಂಗಳು 55 ರಿಂದ 200 ರೂಪಾಯಿಯವರೆಗೆ ಹಣ ತುಂಬಬೇಕು. ಉಳಿದ ಹಣವನ್ನು ಕೇಂದ್ರ ಸರ್ಕಾರ ಕೂಡ ಇಸ್ಟೇ ಹಣವನ್ನು ತುಂಬುತ್ತದೆ ಒಂದು ವೇಳೆ 18 ವಯಸ್ಸಿನಿಂದ ಈ ಯೋಜನೆ ಆರಂಭಿಸಿದರೆ ತಿಂಗಳಿಗೆ ಕನಿಷ್ಟ 55 ರೂಪಾಯಿಯಂತೆ ಕಟ್ಟಬೇಕು. ಒಂದು ವೇಳೆ 40ನೇ ವಯಸ್ಸಿನಲ್ಲಿ ಯೋಜನೆ ಪಡೆದರೆ ತಿಂಗಳಿಗೆ 200 ರೂಪಾಯಿ ಕಟ್ಟಬೇಕು.

ಇದನ್ನೂ ಓದಿ ರೈತರೇ ನಿಮ್ಮ ಜಮೀನಿನ 25 ವರ್ಷ ಹಳೇ ಪಹಣಿ ಮುಟೇಶನ್ ಹೀಗೆ ಚೆಕ್ ಮಾಡಿ

60 ವರ್ಷದವರೆಗೆ ಪ್ರತಿ ತಿಂಗಳು ಪಿಂಚಣಿ ನಿಧಿಗೆ ಕಟ್ಟಬೇಕು. ಅದಾದ ಬಳಿಕ ತಿಂಗಳಿಗೆ 3 ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಪಿಂಚಣಿಯನ್ನು ರೈತರು ಪಡೆಯಬಹುದು.

ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಡಿ ಸೌಲಭ್ಯ ಪಡೆಯಲು ಹೆಸರು ಎಲ್ಲಿ ನೋಂದಾಯಿಸಬೇಕು?

ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ನೀಡಬೇಕು. ರೈತರು ವಯಸ್ಸಿಗೆ ಅನುಗುಣವಾಗಿ ಅವರು ಕನಿಷ್ಟ ಎಷ್ಟು ಹಣ ಕಟ್ಟಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಯೋಜನೆಯಲ್ಲಿ ನೋಂದಣಿ ಮಾಡಿಕೊಂಡ ನಂತರ ರೈತರಿಗೆ ವಿಶೇಷ ಕಿಸಾನ್ ಪೆನ್ಶನ್  ಅಕೌಂಟ್ ನಂಬರ್ ನೀಡಲಾಗುವುದು. ಬಳಿಕ ಕಿಸಾನ್ ಕಾರ್ಡ್ನೀಡಲಾಗುವುದು.

PMkisan mandhan yojana benefit  ಯಾವ ವಯಸ್ಸಿಗೆ ಎಷ್ಟು ಪೆನ್ಶನ್ ಕಟ್ಟಬೇಕು? ಹೀಗೆ ಚೆಕ್ ಮಾಡಿ

ನಿಮ್ಮ ವಯಸ್ಸಿನ ಪ್ರಕಾರ ಎಷ್ಟು ಪೆನ್ಶನ್ ಹಣ ಕಟ್ಟಬೇಕು ಎಂಬುದನ್ನು ಚೆಕ್ ಮಾಡಲು ಈ

https://maandhan.in/show_content.php?lang=1&level=1&ls_id=138&lid=115&page=6

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ಪಿಎಂ ಕಿಸಾನ್ ಮಾನ್ಧನ್ ಕ್ಯಾಲ್ಕುಲೇಶನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ವಯಸ್ಸು ಹಾಗೂ ಅದರ ಮುಂದೆ ಪೆನ್ಶನ್ ಹಣ ಇರುತ್ತದೆ.

10 ರಿಂದ 40 ವಯೋಮಾನದವರಿಗಿನ ಯಾವುದೇ ರೈತರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. 60 ವರ್ಷ ತುಂಬಿದ ನಂತರ ರೈತರು ಮಾಸಿಕವಾಗಿ 3 ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಾರೆ.

ಪಿಎಂ ಕಿಸಾನ್ ಮಾನಧನ್ ಯೋಜನೆಗೆ ನೋಂದಣಿ ಮಾಡಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್, ವಯಸ್ಸಿನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪಾಸ್ ಬುಕ್, ಮೊಬೈಲ್ ಸಂಖ್ಯೆ, ಪಾಸ್ಪೋರ್ಟ್ ಗಾತ್ರದ ಫೋಟೋ ಇರಬೇಕು.

ಪಿಎಂ ಕಿಸಾನ್ ಮಾನಧನ್ ಯೋಜನೆಯಂತೆ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಿಎಂ ಕಿಸಾನ್ ಯೋಜನೆ, ಪಿಎಂ ಕಿಸಾನ್ ಶ್ರಮಯೋಗಿ ಯೋಜನೆ, ಪಿಎಂ ಕಿಸಾನ್ ಮಾನಧನ್ ಯೋಜನೆ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ  ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

Leave a Comment