ಭಾಗ್ಯಲಕ್ಷ್ಮೀ ಹಣ ಬಿಡುಗಡೆ ಯಾರಿಗೆಷ್ಟು ಜಮೆ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Updated on:

Bhagyalakshmi amount status check: ಭಾಗ್ಯಲಕ್ಷ್ಮೀ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ 18 ವರ್ಶ ತುಂಬಿದ ಮಗುವಿನ ಖಾತೆಗೆ ಈಗ ಹಣ ಜಮೆಯಾಗುತ್ತಿದೆ. ನಿಮ್ಮ ಮಗಳ ಹೆಸರಿಗೆ ಯಾವಾಗ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದೀರೆ ನಿಮ್ಮ ಮಗಳ ಹೆಸರಿಗೆ ಯಾವಾಗ ಜಮೆಯಾಗಲಿದೆ ಎಷ್ಟು ಜಮೆಯಾಗಬಹುದು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಏನಿದು ಭಾಗ್ಯಲಕ್ಷ್ಮೀ ಯೋಜನೆ?

ಬಡನತ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿ,ಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮೀ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ ತಂದೆ ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ಹಣ ಜಮೆ ಮಾಡಲಾಗುವುದು.

Bhagyalakshmi amount status check  ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಭಾಗ್ಯಲಕ್ಷೀ ಬಾಂಡ್ ಸ್ಟೇಟಸ್ ಚೆಕ್ ಮಾಡಲು ಈ

https://blakshmi.karnataka.gov.in/blakshmi/First.jsp

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಭಾಗ್ಯಲಕ್ಷ್ಮೀ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನೀವು Query Search ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮಗೆ By Child ID ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ನಂತರ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ಅಲ್ಲಿ ನೀವು ನಿಮ್ಮ ಮಗಳ ಹೆಸರಿಗೆ ನೀಡಲಾದ ಭಾಗ್ಯಲಕ್ಷ್ಮೀ ಬಾಂಡ್ ಐಡಿ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ Image Code Number ಹಾಕಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮಗಳ ಹೆಸರಿಗೆ ಭಾಗ್ಯಲಕ್ಷ್ಮೀ ಬಾಂಡ್ ಯಾವಾಗ ಮಾಡಿಸಲಾಗಿದೆ. ಭಾಗ್ಯಲಕ್ಷ್ಮೀ ಹಣ ಎಷ್ಟು ಬರುತ್ತದೆ. ಯಾವ ದಿನಾಂಕ ನಿಮ್ಮ ಖಾತೆಗೆ ಜಮೆಯಾಗಬಹುದು ಸೇರಿದಂತೆ ಎಲ್ಲಾ ಮಾಹಿತಿ ಮೊಬೈಲ್ ನಲ್ಲೇ ಸಿಗುತ್ತದೆ.

ಭಾಗ್ಯಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹತೆ ಪಡೆದಿರುತ್ತಾರೆ?

ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31-03-2006 ನ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿರುತ್ತಾರೆ.

ಇದನ್ನೂ ಓದಿನಿಮ್ಮ ಜಮೀನಿಗೆ ಹೋಗಲು ಕಾಲುದಾರಿ ಬಂಡಿದಾರಿ ಇದೆಯೇ ಇಲ್ಲೇ ಚೆಕ್ ಮಾಡಿ

ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿತ್ತು. ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ನೋಂದಣಿಯಾದ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ 19300 ಹಾಗೂ ಅದೇ ಕುಟುಂಬದಲ್ಲಿ 2ನೇ ಹೆಣ್ಣು ಮಗವಿನ ಹೆಸರಿನಲ್ಲಿ 18350 ರೂಪಾಯಿಗಳನ್ನು ಠೇವಣಿ ಇಡಲಾಗುತ್ತದೆ. 18 ವರ್ಷ ಪೂಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು 1 ಲಕ್ಷ ರೂಪಾಯಿ ಹಣ ಪಡೆಯಲು ಅರ್ಹರಿರುತ್ತಾರೆ.

ಭಾಗ್ಯಲಕ್ಷ್ಮೀ ಯೋಜನೆಯ ಉದ್ದೇಶಗಳು

ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗವಿನ ಜನನವನ್ನು ಉತ್ತೇಜಿಸಲು ಮತ್ತು ಆತ್ಮಸ್ಥೈರ್ಯ ತುಂಬುವುದು. ಬಾಲ ಕಾರ್ಮಿಕತೆ, ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವುದು. ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಪೌಷ್ಠಿಕ ಮಟ್ಟವನ್ನು ಉತ್ತಮ ಪಡಿಸುವುದರ ಮೂಲಕ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಉತ್ತಮಪಡಿಸುವುದು. ಹೆಣ್ಣು ಮಗವಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಸದೃಢರನ್ನಾಗಿ ಮಾಡುವುದು ಈ ಯೋಜನೆ ಉದ್ದೇಶವಾಗಿದೆ.

Leave a Comment