ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ (cyclone effect rain) ಉಂಟಾಗಿರುವ ಹಿನ್ನೆಲೆಯಲ್ಲಿ ಕಾರವಾರ ನಗರ ಸೇರಿದಂತೆ ಜಿಲ್ಲೆಯ ಕರಾವಳಿಯ ವಿವಿಧೆಡೆ ಮಳೆಯಾಗುತ್ತಿದೆ. ಸಮುದ್ರದ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 14 ರ ನಂತರ ಚಂಡಮಾರುತವಾಗಿ ಪರಿವರ್ತನೆಯಾಗಬಹುದು.
cyclone effect rain ಇದರ ಪರಿಣಾಮವಾಗಿ ಮೇ. 15 ಹಾಗೂ 16 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ಗಂಡೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲಾ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬರದಿರುವಂತೆ ಎಚ್ಚರಿಕೆ ನೀಡಲಾಗಿದೆ.
ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ಮರಳುವಂತೆ ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿ ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ
ಗಾಳಿ, ಮಳೆ ಸಂದರಅಭದಲ್ಲಿ ಮಕ್ಕಳು ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು. ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂನ ಟೋಲ್ ಫ್ರೀ ಸಂಖ್ಯೆ 1077 ಅಥವಾ ವ್ಯಾಟ್ಸಪ್ ನಂಬರ್ 9483511015 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಕೆ, ಕೃಷ್ಣಮೂರ್ತಿ ತಿಳಿಸಿದ್ದಾರೆ.
ಗುಜರಾತ್ ಭಾಗದ ಕರಾವಳಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ಚಂಡಮಾರುತ ಉಂಟಾಗಲಿದ್ದು, ಮ್ಯಾನ್ಮಾರ್ ದೇಶವು ಅದಕ್ಕೆ ತೌಕ್ತೆ (ಹಲ್ಲಿ) ಎಂದು ಹೆಸರಿಟ್ಟಿದೆ.
ಕಳೆದ ವರ್ಷ ಸಂಭವಿಸಿದ ನಿಸರ್ಗ ಚಂಡಮಾರುತದಿಂದ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿತ್ತು. ಈ ವರ್ಷ ಯಾವುದೇ ಹಾನಿಯನ್ನುಂಟು ಮಾಡದೆ ತೌಕ್ತೆ ಚಂಡಮಾರುತ ಹೋದರೆ ಸಾಕು. ಈಗಾಗಲೇ ಕೊರೋನಾದಿಂದಾಗಿ ಜನತೆ ಸಾಕಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ದಾಮಿನಿ ಆ್ಯಪ್ ಡೌನ್ಲೋಡ್ ಮಾಡಿ ಸಿಡಿಲಿನ ಮಾಹಿತಿ ಪಡೆಯಿರಿ
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ದಾಮಿನಿ ಆ್ಯಪ್ ನ್ನು ಡೌನ್ಲೋಡ್ ಮಾಡಿ ಐದು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ಪಡೆದುಕೊಳ್ಳಬಹುದು. ಹೌದು ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ Damini app ಎಂದು ಟೈಪ್ ಮಾಡಬೇಕು. ಆಗ ದಾಮಿನಿ ಆ್ಯಪ್ ಮೇಲ್ಗಡೆ ಕಾಣಿಸುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.lightening.live.damini
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬಹುದು. ನಂತರ ಓಪನ್ ಮೇಲೆ ಕ್ಲಿಕ್ ಮಾಡಿದರೆ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಂಡು ಸರಿ ಮೇಲೆ ಕ್ಲಿಕ್ ಮಾಡಬೇಕು.
ನಿಮ್ಮ ಮೊಬೈಲ್ ನಲ್ಲಿ ಜಿಪಿಎಸ್ ಆನ್ ಇರಬೇಕು. ಜಿಪಿಎಸ್ ಆನ್ ಇದ್ದರೆ ಸಿಡಿಲಿನ ಸ್ಥಳ ಗುರುತಿಸಲು ಸುಲಭವಾಗುತ್ತದೆ. ಇದಕ್ಕೆ ನಾನು ಒಪ್ಪುತ್ತೇನೆ ಬಾಕ್ಸ್ ಆಯ್ಕೆ ಮಾಡಿಕೊಂಡು ಜಿಪಿಎಸ್ ನ್ನು ಸಕ್ರಿಯಗೊಳಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದಿ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ಒಂದು ಸರ್ಕಲ್ ಕಾಣಿಸುತ್ತದೆ. ಅಲ್ಲಿಎ ಷ್ಟು ನಿಮಿಷದೊಳಗೆ ನೀವು ಇರುವ ಸುತ್ತಮತ್ತಲಿನ ಪ್ರದೇಶದ ಎಲ್ಲೆಲ್ಲಿ ಸಿಡಿಲು ಬೀಳುವ ಸಾಧ್ಯತೆ ಎಂಬುದು ಕಾಣಿಸುತ್ತದೆ.