ಬೆಳೆ ಹಾನಿ ಪರಿಹಾರ ಬಿಡುಗಡೆ ನಿಮಗೆಷ್ಟು ಜಮೆ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿ

Written by Ramlinganna

Published on:

Bele parihara status check : ರೈತರಿಗೆ ಗುಡ್ ನ್ಯೂಸ್.  ಬೆಳೆ ಹಾನಿ ಪರಿಹಾರ ಹಣ ಬಿಡುಗಡೆಯಾಗಿರುವುದರಿಂದ ಯಾವ ಯಾವ ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆಯಾಗಿದೆ. ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Bele parihara status check ನಿಮಗೆಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ? ಇಲ್ಲೇ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಹಣ ನಿಮಗೆಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸೆಲೆಕ್ಟ್ ಇಯರ್ ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಋತು ಆಯ್ಕೆ ಮಾಡಿಯಲ್ಲಿ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ವಿಪತ್ತು ಆಯ್ಕೆ ಮಾಡಿ ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ Fetch ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಅಂದರೆ ನಿಮ್ಮ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ಜಿಲ್ಲೆ, ಬ್ಯಾಂಕಿನ ಹೆಸರು, ನಿಮಗೆಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದೆ ನಿಮ್ಮ ಹೆಸರು, ತಂದೆಯ ಹೆಸರು, ಆಧಾರ್ ಸಂಖ್ಯೆ ಕೊನೆಯ ಸಂಖ್ಯೆ, ಯಾವ ದಿನಾಂಕದಂದು ಹಣ ಜಮೆಯಾಗಿದೆ ಹಾಗೂ ಯಾವ ಬೆಳೆಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ನಿಮ್ಮ ಊರಿನಲ್ಲಿ ಯಾರು ಯಾರಿಗೆ ಎಷ್ಟು ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಹಣ ನಿಮಗೆಷ್ಟು ಕಂತು ಜಮೆಯಾಗಿದೆ ಯಾವ ಬೆಳೆಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು  ಈ

https://parihara.karnataka.gov.in/service89/PaymentDetailsReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season  Kharif ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು Select Calamity ನಲ್ಲಿ Flood ಪ್ರವಾಹ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಇದಾದನಂತರ  ನಿಮಗೆ ನಿಮ್ಮ ಊರಿನಲ್ಲಿ ಯಾರು ಯಾರಿಗೆ ಬೆಳೆ ಹಾನಿ ಪರಿಹಾರ ಎಷ್ಟು ಹಣ ಜಮೆಯಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ.

ಯಾವ ಬೆಳೆಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆ

ಬೆಳೆ ಹಾನಿಗೊಳಗಾದ ರೈತರಿಗೆ ಆರ್ಥಿಕ ನೆರವು ನೀಡಿದೆ. ಹೌದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂಪಾಯಿ 8500 ರೂಪಾಯಿಯಿಂದ 17 ಸಾವಿರ ರೂಪಾಯಿಯವರೆಗೆ ನೀಡಲಾಗುವುದು. ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 17 ಸಾವಿರ ದಿಂದ 25500 ರೂಪಾಯಿಯವರೆಗೆ ಹಣ ನೀಡಲಾಗುವುದು. ಅದೇ ರೀತಿ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 22500 ರೂಪಾಯಿಯಿಂದ 31 ಸಾವಿರ ರೂಪಾಯಿಯವರೆಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ? ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ

ಎಸ್.ಡಿ.ಆರ್.ಎಪ್ ಮಾನದಂಡಗಳ ಪ್ರಕಾರ ರೈತರ ಖಾತೆಗೆ ಇನ್ಪುಟ್ ಸಬ್ಸಿಡಿ ಹಣವನ್ನು ನೇರವಾಗಿ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ.

Leave a Comment