Gruhalakshmi amount status check : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವರು ಸಂತಸದ ಸುದ್ದಿಯನ್ನು ನೀಡಿದ್ದಾರೆ. ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ ಇದೀಗ ಎರಡು ಕಂತುಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕದ ಲೋಕಾರ್ಪಣೆ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಎರಡು ತಿಂಗಳ ಹಣವನ್ನು ಅತೀ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಹೇಳಿದ್ದಾರೆ.
Gruhalakshmi amount status check ಯಾವ ಯಾವ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗುವುದಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಅರ್ಹತೆ ಪಡೆದಿರಬೇಕು. ಅಂತಹ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ.
ಗೃಹಲಕ್ಷ್ಮೀ ಎಷ್ಟು ಕಂತುಗಳ ಹಣ ಜಮೆಯಾಗಿದೆ ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಎಷ್ಟು ಕಂತುಗಳ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಎಂಬುದನ್ನು ಮಹಿಳೆಯರು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು. ನಿಮ್ಮಲ್ಲಿರುವ ಮೊಬೈಲ್ ನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರುವುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆಯಪ್ ಓಪನ್ ಆಗುತ್ತದೆ.. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ.
ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಾಗಿದ್ದಾರೆ?
ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಮಹಿಳೆಯರಿಗೆ ಸರ್ಕಾರವು ಅನೇಕ ಷರತ್ತುಗಳನ್ನು ವಿಧಿಸಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಅರ್ಜಿ ಸಲ್ಲಿಕೆ ಹೇಗೆ ಯಾರು ಅರ್ಹರು ಯಾವ ಯಾವ ದಾಖಲೆ ಹೊಂದಿರಬೇಕು ಎಂಬ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು?
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿಗೆ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.
ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಯಾವ ಯಾವ ದಾಖಲೆ ಹೊಂದಿರಬೇಕು
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಶನ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಆಧಾರ್ ಕಾರ್ಡ್ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ : ನಿಮ್ಮ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ? ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ
ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಏನಾಗುತ್ತದೆ ಕುಟುಂಬದ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹತೆಹೊಂದಿರುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು,ಕುಟುಂಬದ ಮುಖ್ಯಸ್ಥೆಯಾಗಿರುವ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತಿಂಗಳಿಗೆ 2 ಸಾವಿರ ರೂಪಾಯಿ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಅಂದರೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗವುದು.





