ಉಚಿತವಾಗಿ ಹೊಲಿಗೆ ಯಂತ್ರ ಅಡುಗೆ ಅನಿಲ ವಿತರಣೆಗೆ ಅರ್ಜಿ ಆಹ್ವಾನ

Written by Ramlinganna

Published on:

Free sewing machine distribute : ಹೊಲಿಗೆ ಯಂತ್ರ ಹಾಗೂ ಅಡುಗೆ ಅನಿಲ ನೀಡಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, 2025-26ನೇ ಸಾಲಿನ ಶೇ. 24.10 ಯೋಜನೆಯಲ್ಲಿ ಪರಿಶಿಷ್ಟ ಪಂಗಡ ವರ್ಗದ 5, ವಿಧವಾ ಮಹಿಳೆಯಿರೆಗ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಯಾಗಿರಬೇಕು ವಾಸಸ್ಥಳ ಪ್ರಮಾಣ ಪತ್ರ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್, ಐಡಿ ಕಾರ್ಡ್, 2 ಫೋಟೋ ಲಗತ್ತಿಸಬೇಕು. ಗಂಡನ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು. ಶೇ. 24.10 ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಈ ಯೋಜನೆಯಡಿ ನಗರಸಭೆ ಅನುದಾನದಲ್ಲಿ ಹೊಲಿಗೆ ಯಂತ್ರ ವಿತರಣೆಗೆ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ಹವಾನಿಸಲಾಗಿದ್ದು, ಅರ್ಜಿದಾರರು (ವಿಧವಾ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. 20 ರಿಂದ 45 ವಯೋಮಾನದ ಒಳಗಿರಬೇಕು.

2026 ರ ಫೆಬ್ರವರಿ 5 ರ ಒಳಗೆ ಯಾದಗಿರಿ ನಗರಸಭೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Free sewing machine distribute ಅಡುಗೆ ಅನಿಲಿಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನ ಶೇ. 24.10 ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ವರ್ಗದ ವಿಧವಾ ಮಹಿಳೆಯರಿಗೆ ಅಡುಗೆ ಅನಿಲ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರು ಉಮೇಶ ಚವ್ಹಾಣ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯ 2 ತಿಂಗಳ 4 ಸಾವಿರ ರೂಪಾಯಿ ಈ ಮಹಿಳೆಯರಿಗೆ ಜಮೆ

ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಹಾಗೂ ಐಡಿ ಕಾರ್ಡ್, 2 ಫೋಟೋ ಲಗತ್ತಿಸಬೇಕು. ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಈ ಯೋಜನೆಯಡಿ ನಗರಸಭೆ ಅನುದಾನದಲ್ಲಿ ಅಡುಗೆ ಅನಿಲ ವಿತರಣೆ ಮಾಡುವ ಕುರಿತು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ವಿಧವಾ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. 20 ರಿಂದ 45 ವಯೋಮಾನದವರು ಯಾದಗಿರಿ ನಗರಸಭೆ ಕಾರ್ಯಾಲಯಕ್ಕೆ ಫೆಬ್ರವರಿ 5 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಮಟ್ಟದ ಸಿರಿಧಾನ್ಯ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ 2026ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು. ಇದಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಹಾಗೂ ತಯಾರಿಸುವ ಖಾದ್ಯ ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷೀಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಜನವರಿಗ 28 ರೊಳಗಾಗಿ

ಈ ಮೇಲ್ ಮೂಲಕ ಅಥವಾ ಖುದ್ದಾಗಿ ಪೋಸ್ಟ್ ಮುಖಾಂತರ ಜಂಟಿ ಕೃಷಿ ನಿರ್ದೇಶಕರು ಕಲಬುರಗಿ 585105 ವಿಳಾಸಕ್ಕೆ ಕಳುಹಿಸಬೇಕು.

ಪ್ರತಿ ಸ್ಪರ್ಧಿಗೆ ಒಂದು ತಿನಿಸು ಖಾರ ಮತ್ತು ಮರೆತುಹೋದ ಖಾದ್ಯಗಳ (ಸಸ್ಯಹಾರಿ ತಿನಿಸುಗಳು ಮಾತ್ರ) ತಯಾರಿಸಲು ಅವಕಾಶವಿರುತ್ತದೆ. ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಫೆಬ್ರವರಿ 2 ರಂದು ಸರಿಯಾಗಿ ಬೆಳಗ್ಗ 11 ಗಂಟೆಗೆ ಕಲಬುರಗಿ ಕೋಟನೂರು (ಡಿ)ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರದರ್ಶಿಸಬೇಕು. ಪ್ರದರ್ಶಿಸುವ ಮುನ್ನ ಅಂದು ಬೆಳಗ್ಗೆ 10 ಗಂಟೆಗೆ ನೋಂದಣಿ ಮಾಡಿಕೊಳ್ಳಬೇಕು. 2024-25ನೇ ಸಾಲಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಅಥವಾ ಜಿಲ್ಲಾಮಟ್ಟದಲ್ಲಿ ಮೊದಲನೇ ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸ್ಪರ್ಧಿಗಳಿಗೆ ಪ್ರಸ್ತುತ ವರ್ಷದಲ್ಲಿ ಭಾಗವಹಿಸಲು ಅವಕಾವಿರುತ್ತದೆ. ಪ್ರಥಮ ಬಹುಮಾನಕ್ಕೆ 5000 ರೂಪಾಯಿ, ದ್ವಿತೀಯ ಬಹುಮಾನಕ್ಕೆ 3000 ರೂಪಾಯಿ ಹಾಗೂ  ತೃತೀಯ ಬಹುಮಾನಕ್ಕೆ 2 ಸಾವಿರ ರೂಪಾಯಿ ನೀಡಲಾಗುವುದು.

Leave a Comment