Pm kisan 22nd installment : ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ? ಯಾವ ಯಾವ ರೈತರಿಗೆ ಜಮೆಯಾಗಲಿದೆ? ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Pm kisan 22nd installment ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ State- ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ District ನೀವು ಯಾವ ಜಿಲ್ಲೆಯವರಾಗಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ : ನೀವು ನಿಂತಿರುವ ಜಮೀನಿನ ಮಾಲಿಕರು ಯಾರಿದ್ದಾರೆ? ಹೀಗೆ ಚೆಕ್ ಮಾಡಿ
ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮೆಯಾಗುತ್ತದೆ?
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುತ್ತದೆ. ಕಳೆದ 21ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಜಮೆಯಾಗಿತ್ತು. ಹಾಗಾಗಿ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಪಿಎಂ ಕಿಸಾನ್ 22ನೇ ಕಂತಿನ ಹಣ ಜಮೆಯಾಗಲಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಜಮೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಮಾತ್ರ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಗೆ ಫಲಾನುಭವಿಗಳ ಪಟ್ಟಿಯಲ್ಲಿದ್ದರೂ ಏಕೆ ಜಮೆಯಾಗುತ್ತಿಲ್ಲ?
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದರೂ ಕೆಲವು ರೈತರಿಗೆ ಹಣ ಜಮೆಯಾಗುತ್ತಿಲ್ಲ. ಏಕೆಂದರೆ ಅವರು ಹೆಸರು ಅಂದರೆ ಆಧಾರ್ ಕಾರ್ಡ್, ಜಮೀನಿನ ಪಹಣಿ ಮತ್ತು ಬ್ಯಾಂಕ್ ಪಾಸ್ ಬುಕ್ ನಲ್ಲಿ ವ್ಯತ್ಯಾಸವಿರುತ್ತದೆ. ಈ ಮೂರು ದಾಖಲೆಗಳಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಸ್ವಲ್ಪ ವ್ಯತ್ಯಾಸವಾಗಿದ್ದರೂ ಜಮೆಯಾಗುವುದಿಲ್ಲ
ಇಕೆವೈಸಿ ಆಗಿದ್ದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗಲ್ಲ. ರೈತರು ಇಕೆವೈಸಿ ಮಾಡಿಸಿರಬೇಕು. ಅಂದಾಗ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಬೇಕಾದರೆ ರೈತರು ತಮ್ಮ ಹತ್ತಿರದ ಸಿಎಸ್ಕೆ ಕೇಂದ್ರಕ್ಕೆ ಭೇಟಿ ನೀಡಿ ಇಕೆವೈಸಿ ಮಾಡಿಸಿಕೊಳ್ಳಬೇಕು. ಇಕೆವೈಸಿ ಮಾಡಿಸದೆ ಇದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುವ ಸಾಧ್ಯತೆ ಕಡಿಮೆಯಿದೆ.
ಆಧಾರ್ ಸೀಡಿ ಆಗಿರಬೇಕು
ಪಿಎಂ ಕಿಸಾನ್ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಬೇಕಾದರೆ ಆಧಾರ್ ಸೀಡ್ ಆಗಿರಬೇಕು. ಹೌದು, ಆಧಾರ್ ಸೀಡ್ ನ್ನು ನೀವು ಯಾವ ಶಾಖೆಯಲ್ಲಿ ಬ್ಯಾಂಕ್ ಅಕೌಂಟ್ ಇದೆಯೋ ಅಲ್ಲಿ ಹೋಗಿ ಆಧಾರ್ ಸೀಡ್ ಮಾಡಬೇಕೆಂದು ಹೇಳಿದರೆ ನಿಮಗೆ ಆಧಾರ್ ಸೀಡ್ ಅರ್ಜಿ ಕೊಡುತ್ತಾರೆ. ಅದರಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ.





