ಗೃಹಲಕ್ಷ್ಮೀ 25 ಮತ್ತು 26ನೇ ಕಂತಿನ 4 ಸಾವಿರ ರೂಪಾಯಿ ಮಹಿಳೆಯರ ಖಾತೆಗೆ ಜಮೆ

Written by Ramlinganna

Published on:

Gruhalakshmi scheme helpline number : ಗೃಹಲಕ್ಷ್ಮೀ ಯೋಜನೆಯ 25 ಮತ್ತು 26ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಕಾಯುತ್ತಿರುವ ಫಲಾನುಭವಿ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್.

ಹೌದು, ಗೃಹಲಕ್ಷ್ಮೀ ಯೋಜನೆಯ 25 ಮತ್ತು 26ನೇ ಕಂತಿನ ಒಟ್ಟು 4 ಸಾವಿರ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಫಲಾನುಭವಿಗಳ ಖಾತೆಗೂ ಜಮೆಯಾಗುತ್ತಿದೆ. ನಿಮ್ಮ ಖಾತೆಗೆ ಹಣ ಜಮೆಯಾಯಿತೋ ಇಲ್ಲವೋ ಹಾಗೂ ಯಾವ ಕಾರಣಕ್ಕಾಗಿ ಹಣ ತಡೆಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಫಲಾನಭವಿಗಳು ಎಲ್ಲಿಯೂ ಹೋಗಬೇಕಿಲ್ಲ. ಮನೆಯಿಂದಲೇ ಒಂದು ಕರೆ ಮಾಡಿದರೆ ಸಾಕು, ಒಂದೇ ನಿಮಿಷದಲ್ಲಿ ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ತಿಳಿದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಹಣ ಯಾವಾಗ ಬರುವುದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿರುತ್ತಾರೆ. ಇನ್ನೂ ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ.

Gruhalakshmi scheme helpline number :  ಉಚಿತ ಸಹಾಯವಾಣಿ ನಂಬರ್ 181

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಹೌದು, 181 ಎಂಬ ಸಂಖ್ಯೆಗೆ ಕರೆ ಮಾಡಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೆ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು.

ನಿಮಗೆಷ್ಟು ಕಂತುಗಳು ಜಮೆಯಾಗಿದೆ ? ಇಲ್ಲಿ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳು ಹಣ ಜಮೆಯಾಗಿದೆ ಎಂಬುದರ ಸ್ಟೇಟಸ್ ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.

ಇಲ್ಲಿಯವರೆಗೆ ನಿಮಗೆಷ್ಟು ಕಂತುಗಳು ಬಂದಿವೆ? ಎಷ್ಟು ಹಣ ಜಮೆಯಾಗಿದೆ?

ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಒಟ್ಟು 26 ಕಂತುಗಳ ಹಣ ಜಮೆಯಾಗಿದೆ. ಹೌದು, 26 ಕಂತುಗಳು ಒಟ್ಟು ಹಣ 54 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.

ಗೃಹಲಕ್ಷ್ಮೀ ಹಣ ಪಡೆಯಲು ಹೊಸ ರೂಲ್ಸ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಪಡೆಯಲು ಈಘ ಜೀವತ ಪ್ರಮಾಣ ಪತ್ರ ಸಲ್ಲಿಸಬೇಕೆಂದು ತಿಳಿಸಲಾಗುತ್ತಿದೆ. ಹೌದು, ಮಹಿಳೆಯರು ಜೀವತ ಪ್ರಮಾಣ ಪತ್ರ ಸಲ್ಲಿಸಿದರೆ ಮಾತ್ರ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ.  ಈ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಹಣ ಸೋರಿಕೆ ತಡೆಯಲು ಸರ್ಕಾರ ಹೊಸ ನಿಮಯ ಜಾರಿಗೆ ತರಲು ಚಿಂತಿಸುತ್ತಿದೆ. ಯೋಜನೆಯ ಪಲಾನುಭವಿಗಳು ಇನ್ನು ಮುಂದೆ ಪ್ರತಿ ವರ್ಷ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆಯಿದ್ದು, ಈ ಪ್ರಸ್ತಾವನೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇದನ್ನೂ ಓದಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವ ಪಾಠದಿಂದ ಯಾವ ಪ್ರಶ್ನೆ ಬರಲಿದೆ? ಇಲ್ಲಿದೆ ಮಾಹಿತಿ

ಮೃತಪಟ್ಟ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗುವುದು.

Leave a Comment