ಶೌಚಾಲಯ ನಿರ್ಮಿಸಿ 20 ಸಾವಿರ ಸಬ್ಸಿಡಿ ಹೀಗೆ ಪಡೆಯಿರಿ

Written by Ramlinganna

Published on:

Toilet construction subsidy get  ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಿಸಿದರೆ 20 ಸಾವಿರ ರೂಪಾಯಿಯವರಿಗೆ ಸಬ್ಸಿಡಿ ಸಿಗುತ್ತದೆ. ಹೌದು, ಯಾವ ಜನಾಂಗದವರು ಎಷ್ಟು ಸಬ್ಸಿಡಿ ಪಡೆಯಬಹುದು ಸಬ್ಸಿಡಿ ಹೇಗೆ ನೀಡಲಾಗುವುದು. ಅರ್ಜಿ ಎಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Toilet construction subsidy get ಶೌಚಾಲಯ ನಿರ್ಮಾಣಕ್ಕೆ ಸಿಗುವ ಸಬ್ಸಿಡಿ ಎಷ್ಟು ?

ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಸಹಾಯಧನ ನೀಡಲಾಗುವುದು. ಹೌದು, ಅರ್ಹತಾ ಮಾನದಂಡಗಳ ಪ್ರಕಾರ ಸಬ್ಸಿಡಿ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ 12 ಸಾವಿರ ರೂಪಾಯಿ ಸಬ್ಸಿಡಿ ಸಿಗುತ್ತದೆ. ಇದರೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 20 ಸಾವಿರ ರೂಪಾಯಿ ಸಹಾಯಧನ ಸಿಗುತ್ತದೆ. ಈ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಎರಡು ಕಂತುಗಳಲ್ಲಿ ನೇರವಾಗಿ ಜಮೆ ಮಾಡಲಾಗುವುದು.

ಶೌಚಾಲಯ ನಿರ್ಮಾಣಕ್ಕೆ ಸಬ್ಸಿಡಿ ಪಡೆಯಲು ಬೇಕಾಗುವ ಅರ್ಹತೆಗಳು

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. ಆ ಕುಟುಂಬವು ಶೌಚಾಲಯವನ್ನು ಹೊಂದಿರಬಾರದು. ಬಡ, ಹಿಂದುಳಿದ ಅಥವಾ ಬಡತನ ರೇಖೆಗಿಂತ ಕೆಳಗಿನ ವರ್ಗಗಳಿಗೆ ಸೇರಿರಬೇಕು. (ವೃದ್ಧರು ಅಥವಾ ವಿಕಲಚೇತನರು ಇರುವ ಕುಟುಂಬಗಳಿಗೆ ಆದ್ಯತೆ ನೀಡಲಾಗುವುದು)

ಎಪಿಎಲ್ ಕಾರ್ಡ್  ಹೊಂದಿದವರಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ರೈತರು, ಭೂರಹಿತ ಕಾರ್ಮಿಕರು ಆಗಿರಬೇಕು. ಆಧಾರ್ ಕಾರ್ಡ್ ಮತ್ತು ಅದಕ್ಕೆ ಲಿಂಕ್ ಮಾಡಿರುವ ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು.

ಅರ್ಜಿ ಹೇಗೆ ಸಲ್ಲಿಸಬೇಕು ?

ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವವಲಿಚ್ಚಿಸುವವರು ಸ್ಥಳೀಯ ಗ್ರಾಮ ಪಂಚಾಯತಿ ಅಥವಾ ಸ್ವಚ್ಛಾಗ್ರಹಿ (ಸ್ಥಳೀಯ ನೈರ್ಮಲ್ಯ ಸ್ವಯಂ ಸೇವಕರು) ಅವರನ್ನು ಸಂಪರ್ಕಿಸಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕದ ರೈತರ ಹೆಸರಿಗೆಷ್ಟು ಎಕರೆ ಜಮೀನಿದೆ? ಇಲ್ಲೇ ಚೆಕ್ ಮಾಡಿ

ಶೌಚಾಲಯವನ್ನು ನಿರ್ಮಿಸಿದ ನಂತರ ಜಿಯೋ ಟ್ಯಾಗಿಂಗ್  ಮತ್ತು ಸ್ವಚ್ಛ ಭಾರತ ಮಿಷನ್ ಇಂಟಿಗ್ರೆಟೆಡ್ ಮ್ಯಾನೇಜ್ ಮೆಂಟ್ ಇನ್ಫರ್ಮೇಶನ್ ಸಿಸ್ಟಮ್ ಪೋರ್ಟಲ್ ಮೂಲಕ ಪ್ರಗತಿಯನ್ನು ಪರಿಶೀಲಿಸಲಾಗುತ್ತದೆ ಪರಿಶೀಲನೆ ಬಳಿಕೆ ಸಹಾಯಧನವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ ?

ಗ್ರಾಮೀಣ ಭಾಗದವರು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಪೋರ್ಟಲ್ ನಲ್ಲಿ ನೋಂದಾಯಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರ ಲಾಗಿನ್ ಐಡಿಯನ್ನು ರಚಿಸಲು ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ವಿವರಗಳ್ನು ಸಲ್ಲಿಸುವ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಲಾಗಿನ್ ಆದ ಮೇಲೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.

ನಗರ ಪ್ರದೇಶದವರು ಸ್ವಚ್ಛ ಭಾರತ ಮಿಷನ್ (ನಗರ) ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು

ಅರ್ಜಿಯನ್ನು ನಗರ ಸ್ಥಳೀಯ ಸಂಸ್ಥೆಯಿಂದ ಪರಿಶೀಲಿಸಲಾಗುತ್ತದೆ. ಅನುಮೋದನೆ ಮತ್ತು ನಿರ್ಮಾಣ ಪ್ರಗತಿಯ ಪರಿಶೀಲನೆ ಪೂರ್ಣಗೊಂಡ ಬಳಿಕ ಸಹಾಯಧನವನ್ನು ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಬೇಕು.  ಇತ್ತೀಚಿನ ಫೋಟೋ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ನಿರ್ಮಾಣ ಹಂತದಲ್ಲಿರುವ ಶೌಚೌಲಯದ ಚಿತ್ರ ತೆಗೆಯಬೇಕು. ಇದರೊಂದಿಗೆ ಬ್ಯಾಂಕ್ ಖಾತೆ ಸಕ್ರೀಯವಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಹೆಸರು ಒಂದೇ ರೀತಿಯಾಗಿರಬೇಕು.

ಅರ್ಜಿ ಸಲ್ಲಿಸಲಿಚ್ಚಿಸುವವರು ಈ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಸಬ್ಸಿಡಿ ಪಡೆದಿರಬಾರದು.

ಸ್ವಚ್ಛ ಭಾರತ ಮಿಷನ್ ಯೋಜನೆ ಯನ್ನು 2014ರ ಅಕ್ಟೋಬರ್ 2 ರಂದು ಜಾರಿಗೆ ತರಲಾಗಿದೆ. ಈ ಯೋಜನೆ ಜಾರಿಗೆ ಬಂದ ನಂತರ ಗ್ರಾಮೀಣ ಪ್ರದೇಶದಲ್ಲಿರುವ ಜನರು ಇದರ ಸೌಲಭ್ಯ ಪಡೆಯುತ್ತಿದ್ದಾರೆ.

Leave a Comment