Pm kisan new released : ರೈತರಿಗೆ ಗುಡ್ ನ್ಯೂಸ್, ಹೌದು, ತಾಂತ್ರಿಕ ಕಾರಣಗಳಿಂದ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿದ್ದಿಲ್ಲವೋ ಅಂತಹ ರೈತರಿಗೆ ಪಿಎಂ ಕಿಸಾನ್ ಜಮೆಯಾಗಿದೆ. ಇದೇನಪಾ ಎರಡು ತಿಂಗಳ ಹಿಂದೆ ಪಿಎಂ ಕಿಸಾನ್ ಹಣ ಜಮೆಯಾಗಿತ್ತು. ಇದು ಹೇಗೆ ಸಾಧ್ಯ. ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿತ್ತು. ಈ ಸಲ ಎರಡು ತಿಂಗಳಲ್ಲೇ ಹೇಗೆ ಜಮೆಯಾಯಿತು ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ. ಉತ್ತರ.
ತಾಂತ್ರಿಕ ಕಾರಣಗಳಿಂದ ರಾಜ್ಯದ 22 ಸಾವಿರ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿದ್ದಿಲ್ಲ. ಕೂಡಲೇ ಬಾಕಿ ಉಳಿದಿರುವ ರೈತರ ಖಾತೆಗೆ ಹಣ ಜಮೆ ಮಾಡಬೇಕೆಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಕೇಂದ್ರಕ್ಕೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಕೇಂದ್ರ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹಣ ಬಿಡುಗಡೆ ಮಾಡಿದೆ.
2025 ರ ಡಿಸೆಂಬರ್ 17 ರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ ಅವರಿಗೆ ಸಚಿವ ಚಲುವರಾಯ ಸ್ವಾಮಿ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30 ಸಾವಿರಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು.
ಕಳೆದ ವಾರ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿ ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಚೌಹಾಣ ರಾಜ್ಯ ಸರ್ಕರಾ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22 ಸಾವಿರ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದೆ.
Pm kisan new released ಯಾವ ಯಾವ ರೈತರ ಹೆಸರು ಸೇರ್ಪಡೆಯಾಗಿದೆ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯುತ್ತಾರೆ ಯಾರ ಹೆಸರು ಸೇರ್ಪಡೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಇದರೊಂದಿಗೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.
ದಾಖಲೆ ಪರಿಶೀಲನೆಗೆ ಸೂಚನೆ
ರಾಜ್ಯದ ರೈತರ ಹಿತದೃಷ್ಟಿಯಿಂದ ನಾವು ಸಲ್ಲಿಸಿದ ಮನವಿಯನ್ನು ಪುನಸ್ಕರಿಸಿ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ರೈತರಿಗೆ ನ್ಯಾಯ ಒದಗಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಸಚಿವ ಚಲುವರಾಯ ಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದ ರೈತರ ಹೆಸರಿಗೆಷ್ಟು ಎಕರೆ ಜಮೀನಿದೆ? ಇಲ್ಲೇ ಚೆಕ್ ಮಾಡಿ
ಕೇಂದ್ರ ಈ ಕ್ರಮದಿಂದಾಗಿ ಅರ್ಹ ರೈತರಿಗೆ ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ಸಿಗುವಂತಾಗಿದೆ.ಉಳಿದ ರೈತರ ದಾಖಲೆಗಳನ್ನು ಪರಿಶೀಲನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಿಎಂ ಕಿಸಾನ್ ಮುಂದಿನ ಕಂತು ಯಾವಾಗ ಜಮೆಯಾಗುತ್ತದೆ?
ಪಿಎಂ ಕಿಸಾನ್ ಮುಂದಿನ ಕಂತು ಮುಂದಿನ ತಿಂಗಳು ಅಂದರೆ ಮಾರ್ಚ್ ತಿಂಗಳಲ್ಲಿ ಮೊದಲ ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ.





