ನಿಮ್ಮ ಜಮೀನಿನ ಆಕಾರ್ ಬಂದ್ ಮುಟೇಶನ್ ಹೀಗೆ ಚೆಕ್ ಮಾಡಿ

Written by Ramlinganna

Published on:

check land akarand mutation :  ರೈತರು ತಮ್ಮ ಜಮೀನಿನ ಆಕಾರಾ ಬಂದ್, ಖಾತಾ ನಂಬರ್ ನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಹೌದು, ರೈತರುತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಆಕಾರ್ ಬಂದ್ ,  ಖಾತಾ ನಂಬರ್ ಚೆಕ್ ಮಾಡಬಹುದು. ಇದರೊಂದಿಗೆ ಜಮೀನಿನ ಮುಟೇಶನ್ ಹಾಗೂ ಜಮೀನಿನ ಪಹಣಿಯನ್ನು ಇಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

check land akarand mutation ಆಕಾರ್ ಬಂದ್ ಚೆಕ್ ಮಾಡವುದು ಹೇಗೆ ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಆಕಾರ್ ಬಂದ್ ಚೆಕ್ ಮಾಡಲು ಈ

https://bhoomojini.karnataka.gov.in/service39/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕಂದಾಯ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು, ಹೋಬಳಿ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹಿಸ್ಸಾ ನಂಬರ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ ಆಕಾರ್ ಬಂದ್ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ಆಕಾರ್ ಬಂದ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಪಹಣಿ ತರಹ ಪೇಜ್ ತೆರೆದುಕೊಳ್ಳುತ್ತದೆ. ಆಕಾರ್ ಬಂದ್ ಪ್ರಕಾರ ನಿಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಇದೆ. ಇದರೊಂದಿಗೆ ಒಟ್ಟು 20 ಕಾಲಂಗಳು ಇರುತ್ತವೆ. ಜಮೀನಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಇಲ್ಲಿ ಲಭ್ಯವಿರುತ್ತದೆ.

ನಿಮ್ಮ ಜಮೀನಿನ ಮುಟೇಶನ ಚೆಕ್ ಮಾಡುವುದು ಹೇಗೆ ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ತಮ್ಮ ಜಮೀನಿಗೆ ಸಂಬಂಧಿಸಿದ ಮುಟೇಶನ್ ಚೆಕ್ ಮಾಡಲು ಈ

https://landrecords.karnataka.gov.in/Service11/MR_MutationExtract.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿಯೂ ಸಹ ನೀವು ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡ ನಂತರ ಸರ್ವೆ ನಂಬರ್  ನಮೂದಿಸಿ Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಮೂದಿಸಿ ಸರ್ವೆ ನಂಬರ್ ಸುತ್ತಮುತ್ತಲಿರುವ ಹಿಸ್ಸಾ ನಂಬರ್ ಪಟ್ಟಿ ಕಾಣಿಸುತ್ತದೆ.

ಇದನ್ನೂ ಓದಿ ಆಧಾರ್ ಕಾರ್ಡಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆಯೇ ? ಇಲ್ಲಿ ಚೆಕ್ ಮಾಡಿ

ಅಲ್ಲಿ ಕಾಣುವ Select ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ನಂತರ Preview ಮೇಲೆ ಕ್ಲಿಕ್ ಮಾಡಬೇಕು ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಮೀನಿನ ಮುಟೇಶನ್ ಪ್ರತಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಅಂದರೆ ಸರ್ವೆ ನಂಬರ್ ನಮೂದಿಸಿದ ಜಮಿನಿನ ಮಾಲಿಕರ ಹೆಸರು ಕಾಣಿಸುತ್ತದೆ. ಅವರ ಹೆಸರಿಗೆ ಜಮೀನು ಎಷ್ಟಿದೆ ಎಂಬ ಮಾಹಿತಿ ಸಹ ಕಾಣಿಸುತ್ತದೆ.

ಖಾತಾ ನಂಬರ್ ಚೆಕ್ ಮಾಡುವುದು ಹೇಗೆ ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಖಾತಾ ನಂಬರ್ ಚೆಕ್ ಮಾಡಲು ಈ

https://landrecords.karnataka.gov.in/service64/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕಂದಾಯ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಸರ್ವೆ ಸಂಖ್ಯೆಯ ಮೂಲಕ ಹುಡುಕಿ ಆಯ್ಕೆ ಮಾಡಿಕೊಳ್ಳಬೇಕು. ಇದಾ ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ಗ್ರಾಮ ಅಂದರೆ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ಹಿಸ್ಸಾ ನಂಬರ್ ಹಾಗೂ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. .

Leave a Comment