ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

Written by Ramlinganna

Published on:

free Sewing Machine  application :  ಗ್ರಾಮೀಣ ಭಾಗದ ಕುಶಲ ಕರ್ಮಿಕಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಉಪ ನಿರ್ದೇಶಕರು, ಕೈಗಾರಿಕಾ ವಿಭಾಗ ಜಿಲ್ಲಾ ಪಂಚಾಯತ್, ಧಾರವಾ ಇವರು ಸುಧಾರಿತ ಉಫಕರಣ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ್ನು ನೀಡಲು ಫಲಾನುಭವಿಗಳಿಂದ ಆನ್ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದರ ಪ್ರಯುಕ್ತ ವಿದ್ಯುತ್ ಚಾಲನತ ಹೊಲಿಗೆ ಯಂತ್ರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ಮಹಿಳಾ ಫಲಾನುಭವಿಗಳು) 18 ರಿಂದ 38 ವರ್ಷ ಒಳಗಡೆ ಇರುವ ಪಲಾನುಭವಿಗಳು ಹಾಗೂ ಕಮ್ಮಾರಿಕೆ, (ಪುರುಷರು), ಕ್ಷೌರಿಕ (ಪುರುಷರು) ಮತ್ತು ಧೋಬಿ (ಪುರುಷ ಮಹಿಳೆಯರು) ಸುಧಾರಿತ ಉಪಕರಣಗಳ ಚಟವಟಿಕೆಗೆ ಕ್ರಿಯಾ ಯೋಜನೆಯ ಗುರಿಗನುಗುಣವಾಗಿ ಅರ್ಜಿಗಳನ್ನು ಸ್ವೀಕೃತವಾಗದೆ ಇರುವುದರಿಂದ ಅವಧಿ ವಿಸ್ತರಿಸಿ ಅರ್ಜಿಗಳನ್ನು ಈ ಮೇಲೆ ತಿಳಿಸಿದಂತೆ ಆಹ್ವಾನಿಸಲಾಗಿದೆ.

ಆದುದ್ದರಿಂದ ಸದರಿ ಸುಧಾರಿತ ಉಪಕರಣಗಳನ್ನು ಪಡೆಯಲು https://dharwad.nic.in/

ವೆಬ್ಸೈಟ್ ನಲ್ಲಿ ಮಾರ್ಚ್ 15 ರೊಳಗಾಗಿ ಆನ್ಲೈನಲ್ಲಿ ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಭಾಗದ ಕುಶಲಕರ್ಮಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಫಲಾನುಭವಿಗಳು 18 ವರ್ಷ ಮೇಲ್ಪಟ್ಟಿರಬೇಕು.

ಆದ್ದರಿಂದ ಮೇಲೆ ವಿವರಿಸಿದಂತೆ 15-03-2026 ರವರೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲು ಈ ಮೂಲಕ ಕೋರಲಾಗಿದೆ.

free Sewing Machine  application ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ) ಎಸ್.ಎಸ್.ಎಲ್.ಸಿ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣ ಪತ್ರ ಇರಬೇಕು.

ಜಾತಿ ಪ್ರಮಾಣ ಪತ್ರ ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪ ಸಂಖ್ಯಾತರಿಗೆ ಮಾತ್ರ. ಪಡಿತರ ಚೀಟಿ ಹಾಗೂ ಮತದಾರರ ಗುರುತಿನ ಚೀಟಿ , ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ ನೀಡಬೇಕು. ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ?

ಉಚಿತವಾಗಿ ಹೊಲಿಗೆ ಯಂತ್ರಕ್ಕಾಗಿ ಆನ್ಲೈನ್ ಮೂಲಕ ಅರ್ಜಿಸಲ್ಲಿಸಲು ಈ

https://sevasindhuservices.karnataka.gov.in/renderApplicationForm.do;jsessionid=4E311E2F8941DCC24F7B456BE1AAD7FC?serviceId=18110049&UUID=fa49275c-d958-45e1-8a0a-c6f213f65331&directService=true&tempId=7889&serviceNameToDisplay=Distribution+of+Electric+Sewing+Machine+to+the+Beneficiaries+in+Industries+and+Commerce+Department&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=7S35-Q2BN-YJEO-DAWU-39RX-ODNU-T13H-89HK

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಒಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆಯ ಹೆಸರು ಧಾರವಾಡ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು ಅರ್ಜಿದಾರರ ಹೆಸರು ಬರೆಯಬೇಕು. ತಂದೆಯ ತಾಯಿಯ ಅಥವಾ ಗಂಡನ ಹೆಸರು ನಮೂದಿಸಬೇಕು. ಲಿಂಗ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರವರ್ಗ ಆಯ್ಕೆ ಮಾಡಿಕೊಳ್ಳಬೇಕು. ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಇ ಮೇಲ್ ವಿಳಾಸ, ರಾಜ್ಯದ ಹೆಸರು, ವಿಳಾಸ ಪಿನ್ ಕೋಡ್ ಶೈಕ್ಷಣಿಕ ಅರ್ಹತೆ ವಿದ್ಯಾರ್ಹತೆ, ಪ್ರಮಾಣ ಪತ್ರಗಳು ಆಯ್ಕೆ ಮಾಡಿಕೊಳ್ಳಬೇಕು.

ಘೋಷಣೆ ಯಲ್ಲಿ I Agree ಆಯ್ಕೆ ಮಾಡಿಕೊಳ್ಳಬೇಕು.ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ Submit ಮೇಲೆ ಕ್ಲಿಕ್ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ವಿವಿಧ ಹುದ್ದೆಗಳ ಭರ್ತಿಗೆ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ಪಿಎಂ ಕಿಸಾನ್ 22 ನೇ ಕಂತಿನ ಹಣ ಯಾರಿಗೆ ಯಾವಾಗ ಜಮೆ? ಇಲ್ಲಿದೆ ಮಾಹಿತಿ

ಹೌದು, ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿರುವ  89 ಅಂಗನವಾಡಿ ಕಾರ್ಯಕರ್ತೆಯರು, 323 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿ ನಗರದಲ್ಲಿ  ಖಾಲಿಯಿರುವ 11 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇಡಂ ತಾಲೂಕಿನ ಮಹಿಳೆಯರು ಹೆಚ್ಚಿನ ಮಾಹಿತಿಗೆ 08411 276136 ಗೆ ಅರ್ಜಿ ಸಲ್ಲಿಸಬಹುದು.

Leave a Comment