Goat training free ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ, ಮೇಕೆ ಸಾಕಾಣಿಕೆ, ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಕುರಿತಂತೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ವಿವಿಧ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೌದು, ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್.ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 13 ರಿಂದ 25 ರವರೆಗೆ ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕ ಮತ್ತು ಎರೆಹುಳು ಗೊಬ್ಬ ತಯಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 12 ಕೊನೆಯ ದಿನವಾಗಿದೆ. ಮಾರ್ಚ್ 17 ರಿಂದ 28 ರವರೆಗೆ ಕುರಿ ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 16 ರಂದು ಕೊನೆಯ ದಿನವಾಗಿದೆ.
Goat training free ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್, ಅಂತ್ಯೋದಯ ರೇಶನ್, ಎಮ್.ಜಿ.ಎನ್.ಆರ್.ಇ.ಜಿ.ಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿ ಪಡೆದ ನಂತರ ಉದ್ಯೋಗ ಆರಂಭಿಸಲು ಬ್ಯಾಂಕುಗಳಿಂದ ಸಾಲ ಸಹಾಯ ಮಾಡಲಾಗುತ್ತದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಪ್ರತಿ ದಿನ ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯೊಳಗಾಗಿ ಹಾಗೂ ಮೊಬೈಲ್ ಸಂಖ್ಯೆ 9901694389, 9900135705, 7019939996, 9901098123, ಹಾಗೂ 9448994585 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ರೈತ ಸಂಜೀವಿನ ಹೆಸರು ನಂದಣಿಗೆ ಮನವಿ
ರೈತ ಸದಸ್ಯರಿಗೆ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ಪಡೆದುಕೊಳ್ಳಲು ನೆರವಾಗುವಂತಹ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳುವುದಕ್ಕಾಗಿ ಮಾರ್ಚ್ 20 ಕೊನೆಯ ದಿನವಾಗಿದೆ ಎಂದು ಗಡಿಲಿಂಗದಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶೈಲೇಶ ಹುಲಿ ತಿಳಿಸಿದ್ದಾರೆ.
ಇದನ್ನೂ ಓದಿ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ರೈತರು ಸಂಘದ ಸದಸ್ಯರಾಗಿದ್ದರೆ ಸೇವಾ ಶುಲ್ಕ ಮತ್ತು ಅಗತ್ಯ ದಾಖಲೆ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೇತನ ಪಡೆದುಕೊಳ್ಳುವ ಸರ್ಕಾರಿ ನೌಕರರು ಈ ಯೋಜನೆಗೆ ಅರ್ಹರಲ್ಲ ಹೀಗಾಗಿ ಬಡ ರೈತರಿಗೆ ನೆರವಾಗಲು ಸರ್ಕಾರ ರೂಪಿಸಿದ ಯೋಜನೆ ಪುನಃ ಜಾರಿಗೊಳಿಸಿದೆ.
ರೈತ ಸಹಕಾರಿ ಸಂಘಗಳ ಕಾರ್ಯಾಲಯಕ್ಕೆ ಹೋಗಿ ಹೆಸರು ನೋಂದಾವಣಿ ಮಾಡಿಕೊಳ್ಳಬೇಕೆಂದು ಗಡಿಲಿಂಗದಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶೈಲೇಶ ಹುಲಿ ತಿಳಿಸಿದ್ದಾರೆ.
ಕುರಿ ಮೇಕೆ ಘಟಕ ಸ್ಥಾಪನೆಗೆ ಸಬ್ಡಿ ನೀಡಲು ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 10 + 1 ಕುರಿ ಅಥವಾ ಮೇಕೆ ಘಟಕ ಯೋಜನೆಯನ್ನು ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆಗೆ ಪರಿಶಿಷ್ಟ ಜಾತಿ -23, ಪರಿಶಿಷ್ಟ ಪಂಗಡ 22 ಸೇರಿ ಒಟ್ಟು 45 ಗುರಿಯನ್ನು ನೀಡಲಾಗಿದ್ದು, ಸರ್ಕಾರದ ಮಾರ್ಗ ಸೂಚಿಗಳಂತೆ ವಿಧಾನ ಸಭಾ ಕ್ಷೇತ್ರದ ಶಾಸಕ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ನಡೆಯಲಿದೆ.
ಈ ಯೋಜನೆಯ ಗ್ರಾಮೀಣ ಭಾಗದ ಎಸ್ಟಿ ಮತ್ತು ಎಸ್ಟಿ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 11 ರೊಳಗಾಗಿ ದ್ವಿ ಪ್ರತಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಮುಖ್ಯ ಪಶು ವೈದ್ಯಾಧಿಕಾರಿಗಳು ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ನಿಗಮದ ಸಹಾಯಕ ನಿರ್ದೇಶಕ ಕಚೇರಿ ರಾಯಚೂರುರನ್ನು ಸಂಪರ್ಕಿಸಬಹುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.





