ರೈತರಿಗೆ ಗುಡ್ ನ್ಯೂಸ್ – ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಕೊಡುಗೆ

Written by Ramlinganna

Published on:

karnataka state budget 2026 : ನಾನು ಸದಾ ರೈತರ ಪರ ಇರುತ್ತೇನೆ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಬಜೆಟ್ ನಲ್ಲಿ ಅನ್ನದಾತರಿಗೆ ಭರಪೂರ ಕೊಡಗುಗೆ ನೀಡಿದ್ದಾರೆ.

ಹೌದು,ದೇಶದ ಬೆನ್ನೆಲುಬುವಾಗಿರುವ ರೈತ ಸಮುದಾಯಕ್ಕೆ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರ್ಜರಿ ಕೊಡಗೆಗಳನ್ನು ನೀಡಿದ್ದಾರೆ. ಹಾಗಾದರೆ ಬಜೆಟ್ ನಲ್ಲಿ ರೈತರಿಗೇನೇನು ಸಿಕ್ಕಿದೆ ಯಾವೆಲ್ಲಾ ಯೋಜನೆಗಳನ್ನು ಸಿದ್ದರಾಮಯ್ಯನವರು ಜಾರಿಗೊಳಿಸಿದ್ದಾರೆ ಎಂಬ ಮಾಹಿತಿ ಇಲ್ಲಿದೆ

ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ.

ಹೌದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕೇಂದ್ರ ಪುರಸ್ಕೃತ ಗಣಕೀರಣ ಯೋಜನೆಯಿ ಆನ್ಲೈನ್ ಸೇವೆಯನ್ನು ಒದಗಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿದ 1628 ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಗಣಕೀರಣಗೊಳಿಸಲು ಉದ್ದೇಶಿಸಲಾಗಿದೆ.

karnataka state budget 2026 ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು ?

ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಹಿತ ಕಾಪಾಡಲು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ 100 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ.

1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕ ಸ್ಥಾಪಿಸಿ ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂಪಾಯಿ ಅನುದಾನ ಮೀಸಲು, 50 ಸಾವಿರ ರೈತರಿಗೆ ಸಹಾಯ ಧನ ನೀಡಲು 428 ಕೋಟಿ ರೂಪಾಯಿ ಅನುದಾನ. 10 ತಾಲೂಕುಗಳಲ್ಲಿ ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷ ಕೃಷಿ ಹೊಂಡ ನಿರ್ಮಾಣ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ, ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಅನುಷ್ಠಾನ, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿ ಈ ವರ್ಷದಿಂದ ತರಗತಿ ಆರಂಭವಾಗುವುದು.

ಸಾವಯವ ಮತ್ತು ಸಿರಿಧಾನ್ಯಗಳ ಹಬ್ ಸ್ಥಾಪನೆ, ವಿಜಯಪುರದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ, ಬೆಂಗಳೂರಿನಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ, ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕವಾಗಿ ಸತ್ತರೆ ಪರಿಹಾರ ಹೆಚಳ ಮಾಡಲಾಗಿದೆ.

ಇಷ್ಟೇ ಅಲ್ಲದೆ ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಶನ್  ಕೇಂದ್ರಗಳನ್ನು ಸ್ಥಾಪಿಸಲು ಕ್ರಮ, ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂಸರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಸಿಗುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.

ಇದನ್ನೂ ಓದಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು

ಸುಸ್ಥಿರಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಾಡ ತಾಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲೂಕನ್ನಾಗಿ ಪರಿವರ್ತಿಸಲಾಗುವುದು.

ತೋಟಗಾರಿಗೆ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂಪಾಯಿ ಸಹಾಯ ಧನವನ್ನು ಒದಗಿಸಲಾಗುತ್ತದೆ. 54 ಮಲೆನಾಡು ಜಿಲ್ಲೆಗಳಲ್ಲಿ ಎಲೆ  ಚುಕ್ಕೆ ರೋಗದ ಬಾದೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂಪಾಯಿ ಒದಗಿಸಲಾಗಿದೆ.

ಪಶು ಸಂಗೋಪನೆಯಲ್ಲಿ ಜಾನುವಾರುಗಳ ಆಕಸ್ಮಿಕವಾಗಿ ಸತ್ತರೆ ಅನುಗ್ರಹ ಯೋಜನೆಯಡಿ ಪರಿಹಾರ ಹೆಚ್ಚಿಸಲಾಗಿದೆ. ಪರಿಹಾರದ ಮೊತ್ತವನ್ನು 10 ಸಾವಿರಗಳಿಂದ 15 ಸಾವಿರ ರೂಪಾಯಿಗೆ ಏರಿಕೆ, ಕುರಿ ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5 ಸಾವಿರ ರುಪಾಯಗಳಿಂದ 7500 ರೂಪಾಯಿಗಳಿಗೆ ಹೆಚ್ಚಿಸ

Leave a Comment