Pm kisan release amount : ಪಿಎಂ ಕಿಸಾನ್ 22ನೇ ಕಂತಿನ ಹಣ ಮಾರ್ಚ್ 13 ರಂದು ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಜಮೆ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಇದೇ ಮಾರ್ಚ್ 13 ರಂದು ಸಾಯಂಕಾಲ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಜಮೆಯಾಗಲಿದೆ.
ಅಸ್ಸಾಂ ರಾಜ್ಯದ ಗೌಹಾತಿ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಹಣ ಬಿಡುಗಡೆಯಾಗಲಿದೆ. ದೇಶದ 9 ಕೋಟಿ 32 ಲಕ್ಷ ರೈತರ ಖಾತೆಗೆ 18 ಸಾವಿರ 640 ಕೋಟಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರ ಖಾತೆಗೆ ಜಮೆಯಾಗಲಿದೆ ಎಂಬುದನ್ನು ಇಲ್ಲಿ ನೋಡೋಣ.
Pm kisan release amount ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ನಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಅವರ ಹೆಸರು ಕಾಣಿಸುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಆಧಾರದ ಮೇಲೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು. ಅಲ್ಲಿ ಕೆಳಗಡೆ ಪೇಜ್ ಸಂಖ್ಯೆ ಇರುತ್ತದೆ. ನಂಬರ್ ಗಳ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ನೋಡಬಹುದು.
ಪಿಎಂ ಕಿಸಾನ್ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಲಿದೆ
ಪಿಎಂ ಕಿಸಾನ್ ಯೋಜನೆಯ ಹಣ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ಹಣ ಜಮೆಯಾಗುವುದಿಲ್ಲ. ಪಿಎಂ ಕಿಸಾನ್ ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ನಂತರ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು. ಫ್ರೂಟ್ಸ್ ಐಡಿ ಇಲ್ಲದಿದ್ದರೆ ಮುಂದಿನ ಕಂತು ಜಮೆಯಾಗುವುದಿಲ್ಲ. ಇನ್ನೂ ಸಮಯವಾಕಾಶವಿದೆ. ಯಾರು ಯಾರು ಫ್ರೂಟ್ಸ್ ಐಡಿಗೆ ನೋಂದಣಿ ಮಾಡಿಸಿಲ್ಲವೋ ಅವರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಇದಕ್ಕೆ ಆಧಾರ್ ಕಾರ್ಡ್. ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಸರ್ವೆ ನಂಬರ್ ಪಹಣಿ ಬೇಕಾಗುತ್ತದೆ. ಪಹಣಿ ಝರಾಕ್ಸ್ ಪ್ರತಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಓದಿ ಗೃಹಲಕ್ಷ್ಮೀಯರ ಖಾತೆಗೆ 28,608 ಕೋಟಿ ರೂಪಾಯಿ ಸ್ಟೇಟಸ್ ಇಲ್ಲಿ ಚೆಕ್ ಮಾಡಿ
2019 ರ ಮೊದಲು ಯಾರ ಯಾರ ಹೆಸರಿಗೆ ಜಮೀನಿದೆಯೋ ಅಂತಹ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಹಣ ಜಮೆಯಾಗಲಿದೆ. ಕುಟುಂಬದಲ್ಲಿ ಸರ್ಕಾರದ ನೌಕರಸ್ಥರಿದ್ದರೆ ಆ ಕುಟುಂಬದಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ.
ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಪಹಣಿಯಲ್ಲಿ ಹೆಸರು ಒಂದೇ ಆಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಿದ್ದರೂ ಸಹ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಹಾಗಾಗಿ ಹೆಸರು ಒಂದೇ ರೀತಿ ಆಗಿರುವಂತೆ ನೋಡಿಕೊಳ್ಳಬೇಕು.





