today here rain alert : ಸುಡು ಬಿಸಿಲಿನಿಂದ ತತ್ತರಿಸಿದ ಜನರಿಗೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ಸೋಮವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದರಿಂದ ಬಿಸಲಿನಿಂದ ತತ್ತರಿಸಿದ ಜನರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿದೆ.
today here rain alert ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ರಾಜ್ಯದಲ್ಲಿ ಈಗಾಗಲೇ ವಿವಿಧೆಡೆ ಮಳೆ ಸುರಿಯುತ್ತಿದೆ. ಇಂದು ಸೋಮವಾರ ಬಳ್ಳಾರಿ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ನಗರದ ವಿವಿಧೆಡೆ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ ಸುರಿದ ಮಳೆ ಕಾಫಿ ಬೆಳೆಗಾರರರಲ್ಲಿ ಖುಶಿ ತಂದಿದೆ. ಯಾದಗಿರಿ, ಕಲಬುರಗಿ ರಾಯಚೂರು ಜಿಲ್ಲೆಗಳಲ್ಲಿ ಬಹುತೇಕ ಮಳೆ ಸಾಧ್ಯತೆ ತುಂಬಾ ಕಡಿಮೆ ಇದೆ.
ಮಾರ್ಚ್ 16 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಕೊಡಪ್ಪಳ, ಹಾವೇರಿ, ಗದಗ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಚಿತ್ರದುರ್ಗ, ರಾಮನಗರ, ವಿಜನಯನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಹವಾಮಾನ ಇರುವ ಸಾದ್ಯತೆಯಿದೆ.
ಮಾರ್ಚ್ 17 ರಂದು ಹಾಸನ, ರಾಮನಗರ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.
ಮಾರ್ಚ್ 17 ಮತ್ತು 18 ರಂದು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರದ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
today here rain alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
today here rain alert ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು
ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವ ಪಾಠಗಳಿಂದ ಪ್ರಶ್ನೆ ಬರುತ್ತವೆ? ಇಲ್ಲಿದೆ ಮಾಹಿತಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





