ಇವಿ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Goods vehicle purchases subsidy : ಇವಿ ಗೂಡ್ಸ್ ವಾಹನ ಖರೀದಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ  2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಕಿಯೋಸ್ಕ್)  ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್  ಮೂಲಕ ಅರ್ಜಿ ಸಲ್ಸಿಕೆ ಕೊನೆಯ ದಿನಾಂಕದಲ್ಲಿ ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲುಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇ.ವಿ ಗೂಡ್ಸ್ ವಾಹನಗಳನ್ನು  ಅಗತ್ಯಕ್ಕೆತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ  ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ 3 ಲಕ್ಷ ರೂಪಾಯಿಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು.

ನಗರ ಪ್ರದೇಶಧ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ- 1, 2ಎ, 3ಎ, ಮತ್ತು 3 ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಶಿಕ ವರಮಾನ 3 ಲಕ್ಷ ದೊಳಗಿರಬೇಕು. ಅರ್ಜಿದಾರರ ವಯೋಮಿತಿ 21 ರಿಂದ 45 ವಯೋಮಾನದೊಳಗಿರಬೇಕು.

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್

https://sevasindhu.karnataka.gov.in

ಮೂಲಕ ಗ್ರಾಮ ಒನ್, ಗುಲ್ಬರ್ಗ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಮಾರ್ಚ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 4 ರವರೆಗೆ ನಿಗದಿಪಡಿಸಲಾಗಿತ್ತು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in ವೆಬ್ಸೈಟ್ ನ್ನು ನಿಗಮದ ಸಹಾಯವಾಣಿ ಸಂಖ್ಯೆ 080-22374837 ಮತ್ತು 8050770004 ಅಥವಾ 8050770005 ಅಥವಾ ಕಲಬುರಗಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.

Goods vehicle purchases subsidy ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ

2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಅಥವಾ ಟಿಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿ ಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 23 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 13 ರಂದು ನಿಗದಿಪಡಿಸಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿ ಷ್ಟ ಪಂಗಡದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ ಗೃಹಲಕ್ಷ್ಮೀ 27ನೇ ಕಂತಿನ ಹಣ ನಿಮಗೆ ಜಮೆಯಾಯಿತೇ? ಹೀಗೆ ಚೆಕ್ ಮಾಡಿ

ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಸ್ವಯಂ ದೃಡೀಕರಿಸಿ, ಲಗತ್ತಿಸಿ ಮಾರ್ಚ್ 23 ರೊಳಗಾಗಿ ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳು ಗ್ರೇಡ್ 2 ನಿಂದ ಗ್ರೇಡ್ 1 ಪಂಚಾಯತಿಗಳಾಗಿದ್ದು ಇದಕ್ಕೆ ತಕ್ಕಂತೆ ಜಿಲ್ಲೆಯಲ್ಲಿ 16 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಚಾಮರಾಜನಗರ ತಾಲೂಕಿನ ದೊಡ್ಡಮೊಳೆ, ಹರವ, ಕಡ್ಲೂರು, ಗುಂಡ್ಲುಪೇಟೆ ಸೇರಿದಂತೆ ಇನ್ನಿತರ  ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

Leave a Comment