four days rain alert here : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ ಕೆಲವೆಡೆ ರಾಶಿ ರಾಶಿ ಆಲಿಕಲ್ಲು ಬಿದ್ದ ಪರಿಣಾಮದಿಂದಾಗಿ ರಾಜ್ಯದ ಜನರು ಪುಳಕಿತಗೊಂಡರು.
ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಬೀದರ್, ಕಲಬುರಗಿ, ಗದಗ, ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 18 ರಿಂದ 22 ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
four days rain alert here ನಿಮ್ಮೂರಿನ ಮಳೆಯ ಮಾಹಿತಿ ಬೇಕೆ? 92433 45433 ಈ ನಂಬರಿಗೆ ಕರೆ ಮಾಡಿ
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಮೊಬೈಲ್ ನಲ್ಲೇ ಸಿಡಿಲಿನ ಮಾಹಿತಿ ಪಡೆಯಿರಿ
ಮೊಬೈಲ್ ನಲ್ಲೇ ಸಿಡಿಲಿ ಮಾಹಿತಿ ಪಡೆಯಲು ದಾಮಿನಿ ಯಾಪ್ ಎನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ನಮ್ಮ ಸುತ್ತಮುತ್ತಲಿನ 20 ರಿಂದ 40 ಕಿ.ಮೀ ವ್ಯಾಪ್ತಿಯಲ್ಲಿ ಸಿಡಿಲು ಬಡೆಯುವ ಮುನ್ಸೂಚನೆಯನ್ನು 30 ರಿಂದ 40 ನಿಮಿಶಗಳ ಮುಂಚಿತವಾಗಿ ಎಚ್ಚರಿಕೆ ಸಂದೇಶಗಳ ಮೂಲಕ ನೀಡುತ್ತದೆ.
ದಾಮಿನಿ ಯಾಪ್ ನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ Damini ಎಂದು ಟೈಪ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಹುದು. ಜಿಪಿಎಸ್ ಆನ್ ಮಾಡಿ ನಿಮ್ಮ ಸ್ಥಳದ ಮಾಹಿತಿಯನ್ನು ಲಾಗಿನ್ ಮಾಡಿಕೊಳ್ಳಬೇಕು. ಯಾಪ್ ನಲ್ಲಿ ಕೆಂಪು ಬಣ್ಣದ ಎಚ್ಚರಿಕೆ ಬಂದರೆ ಸಿಡಿಲು ಬಡಿಯುವ ಸಾಧ್ಯತೆ ಇರುತ್ತದೆ. ಕೂಡಲೇ ಸುರಕ್ಷಿತ ಸ್ಥಳಕ್ಕೆ ಹೋಗಬಹುದು.
ಮುಂಗಾರು ಪೂರ್ವದಲ್ಲಿ ಗುಡುಗು ಸಿಡಿಲ ಸಹಿತ ಮಳೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಾವು ನೋವುಗಳು ಕಂಡು ಬರುತ್ತದೆ. ಇದರ ಪ್ರಭಾವ ರಾಜ್ಯದ ರೈತರು ಮತ್ತು ಸಾರ್ವಜನಿಕರ ಮೇಲೆ ಬೀಳುತ್ತದೆ. ಸಿಡಿಲಿನಿಂದ ರಾಜ್ಯದಲ್ಲಿ ನೂರಾರು ರೈತರು ಸಾವನ್ನಪ್ಪುತ್ತಾರೆ. ಈ ಸಾವು ನೋವಗಳನ್ನು ತಡೆಯುವುದಕ್ಕಾಗಿ ರಾಜ್ಯ ಸರ್ಕಾರವು ದಾಮಿನಿ ಎಂಬ ಯಾಪ್ ನ್ನು ಅಭಿವೃದ್ಧಿಪಡಿಸಿದೆ. ರೈತರು, ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಮಿಂಚು ಬರುವ ಮುನ್ಸೂಚನೆಯನ್ನು ತಿಳಿದುಕೊಳ್ಳಲು ದಾಮಿನಿ ಯಾಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.





