ಉಚಿತವಾಗಿ ಹೊಲಿಗೆ ತರಬೇತಿ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

free training to women and farmer ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಬೇಕೆಂಬ ಉದ್ದೇಶದಿಂದ ಸರ್ಕಾರದ ವತಿಯಿಂದ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ.

ಹೌದು, ಚಾಮರಾಜನಗರ ಜಿಲ್ಲೆಯ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗೆ ಊಟ ವಸತಿಯೊಂದಿಗೆ ಉಚಿತವಾಗಿ ಮಹಿಳಾ ಹೊಲಿಗೆ ತರಬೇತಿ ನೀಡಲಾಗುತ್ತಿದೆ.

ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಏಪ್ರೀಲ್ 1 ರಂದು ತರಬೇತಿ ಪ್ರಾರಂಭವಾಗಲಿದ್ದು, 31 ದಿನಗಳ ಕಾಲ ತರಬೇತಿ ನೀಡಲಾಗುವುದು. ತರಬೇತಿಗೆ ಬರುವಾಗ ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ತರಬೇಕು.

ಅಭ್ಯರ್ಥಿಗಳು 18 ರಿಂದ 45 ವಯೋಮಾನದೊಳಗಿರಬೇಕು. ತರಬೇತಿಯನ್ನು ಮಾದಾಪುರದ ಸಂತೇಮರಳ್ಳಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್  ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9606098878, 8722483393, 7676291416 ಸಂಪರ್ಕಿಸುವಂತೆ ಎಸ್.ಬಿ.ಐ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

free training to women and farmer ರೈತರಿಗೆ ಉಚಿತ ತರಬೇತಿ ನೀಡಿ ತಿಂಗಳಿಗೆ 1750 ರೂಪಾಯಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ಕಾಲ ಉಚಿತ ತರಬೇತಿ ನೀಡಲು ರಾಜ್ಯದ ರೈತರ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ಕಾಲ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನ ತರಬೇತಿಯನ್ನ 2026ರ ಮೇ 2 ರಿಂದ 2027ರ ಫೆಬ್ರವರಿ 28 ರವರೆಗೆ ತರಬೇತಿ ನೀಡಲಾಗುವುದು.

ಪಹಣಿ ಹೊಂದಿರುವ ರೈತರ ಮಕ್ಕಳಿಗೆ ತರಬೇತಿ ಆಯೋಜಿಸಲಾಗಿದೆ. ತರಬೇತಿ ಪಡೆಯಲಿಚ್ಚಿಸುವವರು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ಈ ತರಬೇತಿಗೆ ಸಂಬಂಧಪಟ್ಟ ಎಲ್ಲಾ ವಿಷಯಗಳನ್ನು ಕನ್ನಡದಲ್ಲಿ ಮಾತ್ರ ಹೇಳಲಾಗುತ್ತದೆ. ಆದ್ದರಿಂದ ಅಭ್ಯರ್ಥಿಯು ಕನ್ನಡ ಓದುವುದು, ಬರೆಯುವುದು ಹಾಗೂ ಮಾತನಾಡುವುದನ್ನು ತಿಳಿದಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವಯೋಮಾನದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ 18 ರಿಂದ 30 ವರ್ಷ ಹಾಗೂ ಮಾಜಿ ಸೈನಿಕರಾದಲ್ಲಿ 35 ರಿಂದ 65 ವಯೋಮಾನದೊಳಗಿರಬೇಕು. ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಪಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಪ್ರಾಯೋಗಿಕ ತರಗತಿಗಳಲ್ಲಿ ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು. ಮಾಜಿ ಸೈನಿಕರು ಸಾಗುವಳಿ ಜಮೀನು ಹೊಂದಿರುವ ಬಗ್ಗೆ ಪಹಣಿಯನ್ನು ನೀಡುವುದು.

ಇದನ್ನೂ ಓದಿ ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ತಿಂಗಳಿಗೆ 3 ಸಾವಿರ ಹೀಗೆ ಸಿಗಲಿದೆ

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1750 ರೂಪಾಯಿಗಳ ಮಾಸಿಕ ಶಿಷ್ಯವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ) ವನ್ನು ನೀಡಲಾಗುವುದು.

ಶಿಷ್ಯವೇತನವನ್ನು ಅಭ್ಯರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಸದರಿ ಶಿಷ್ಯವೇತನದಲ್ಲಿ ಪ್ರತಿ ತಿಂಗಳು ಆಯ್ಕೆಯಾಗುವ ಇಬ್ಬರು ವೀಕ್ಷಕರು ಊಟದ ವ್ಯವಸ್ಥೆಗಳಾದ ವಿವಿಧ ರೀತಿಯ ಭೋಜನ ಮತ್ತು ಗುಣಮಟ್ಟದ ಆಹಾರವನ್ನು ನೀಡುವ ನಿರ್ವಹಣೆಯನ್ನು ಮತ್ತು ಶಿಷ್ಯವೇತನದಲ್ಲಿಯೇ ವೆಚ್ಚ ಭರಿಸುವ ಜವಾಬ್ದಾರಿಯನ್ನು ಅಭ್ಯರ್ಥಿಗಳೇ ವಹಿಸಬೇಕು. ಪ್ರತಿ ವಿದ್ಯಾರ್ಥಿಯು ತಮ್ಮ ಸ್ವಂತ ಖರ್ಚಿನಲ್ಲಿ ಹಸಿರು ಬಣ್ಣದ ಸಮವಸ್ತ್ರಗಳನ್ನು ಹೊಲಿಸಿಕೊಂಡು ತರಬೇತಿ ಸಮಯದಲ್ಲಿ ಕಡ್ಡಾಯವಾಗಿ ಧರಿಸಿಕೊಳ್ಳಬೇಕು. ಅಭ್ಯರ್ಥಿಯು ತರಬೇತಿಯ ಮಧ್ಯದಲ್ಲಿ ಬಿಟ್ಟು ಹೋದರೆ ಅದುವರೆಗೂ ಪಡೆದಿರುವ ಶಿಷ್ಯವೇತನವನ್ನು ಹಿಂದಿರುಗಿಸಲಾಗುವುದು.

ಅರ್ಜಿಗಳನ್ನು ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಲ್ಲಿ ಪಡೆದುಕೊಳ್ಳಬಹುದು. ಏಪ್ರೀಲ್ 15 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ತೋಟಗಾರಿಕೆ ಇಲಾಖೆಗಳಲ್ಲಿ ಸಂಪರ್ಕಿಸಬಹುದು.

Leave a Comment