ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ ನಿಮಗೆ ಜಮೆಯಾಯಿತೇ ಇಲ್ಲೇ ಚೆಕ್ ಮಾಡಿ

Written by Ramlinganna

Published on:

Gruhalakshmi 29th installment credit : ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ.

ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು 77,66,82,000 ಬಿಡುಗಡೆ ಮಾಡಿದೆ. ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಅವರಿಗೆ ಮನೆಯಲ್ಲಿ ಗೌರವ ಹೆಚ್ಚಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಫಲಾನುಭವಿಗಳು ಸಹ ತಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Gruhalakshmi 29th installment credit  ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಯಾರಿಗೆ ಕರೆ ಮಾಡಬೇಕು?

ಗೃಹಲಕ್ಷ್ಮೀ ಯೋಜನೆಯ 27ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್  ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.

ಇದನ್ನೂ ಓದಿ  ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅತೀ ಶೀಘ್ರದಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಈಗಾಗಲೇ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ ಹಾವೇರಿ, ಕೊಡಗು, ದಾವಣಗೆರೆ, ವಿಜಯಪುರ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಅತೀ ಶೀಘ್ರದಲ್ಲಿ ಎಲ್ಲಾ ಫಲಾನುಭವಿಗಳ ಖಾತಗೆ ಹಣ ಜಮೆ ಮಾಡಲಾಗುವದು.

ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್. ರೇಶನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೆ ಅಂತಹ ಮಹಿಳೆಯರ ಖಾತೆಗೆ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ. ಹಾಗಾಗಿ ಕೆಲವರಿಗೆ ಜಮೆಯಾಗುತ್ತಿದೆ. ಇನ್ನೂ ಕೆಲವರಿಗೆ ಗೃಹಲಕ್ಷ್ಮೀ ಹಣ ಜಮೆಯಾಗುತ್ತಿಲ್ಲ.

Leave a Comment