ಇಂದಿನಿಂದ ಒಂದು ವಾರ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

one week again rain : ರಾಜ್ಯದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಳನಾಡಿನ ಬೆಳಗಾವಿ, ಗದಗ ಹಾಗೂ ಧಾರವಾಡ ಜಿಲ್ಲೆಯ ಕೆಲವೆಡೆ ಏಪ್ರೀಲ್ 13 ರಿಂದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

one week again rain ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಸೂರು, ಮಂಡ್ಯ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ.

ಏಪ್ರೀಲ್ 12 ಮತ್ತು 13 ರಂದು ಒಳನಾಡು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಮತ್ತು ಕರಾವಳಿ ಭಾಗದ ಒಂದೆರಡು ಕಡೆ ಮಾತ್ರ ಮಳೆ ಆಗಲಿದ್ದು, ಉಳಿದಂತೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಅತ್ಯದಿಕ ತಾಪಮಾನ ಕಂಡು ಬರಲಿದೆ.

ಏಪ್ರೀಲ್ 14 ರಿಂದ 17 ರವರೆಗೆ ಪೂರ್ವ ಮುಂಗಾರು ಮಳೆ ಅಬ್ಬರ ಕರಾವಳಿ ಪ್ರದೇಶ ಒಳಗೊಂಡಂತೆ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಉತ್ತಮ ಮಳೆ ನಿರೀಕ್ಷೆಯಿದೆ. ಕಲ್ಯಾಣ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಇತ್ತ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಬೀದರ್, ಕೊಡಗು, ಹಾಸನ, ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಬೆಂಗಳೂರಿನ ಹವಾಮಾನ ಮುನ್ಸೂಚನೆ

ಭಾನುವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನು ಈ ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

 

Leave a Comment