ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ರೈತರ ಆಕ್ಷೇಪಣೆಗೆ ಅವಕಾಶ

Written by Ramlinganna

Published on:

still crop insurance not credited : ಬೆಳೆ ವಿಮೆ ಹಣ ಜಮೆಯಾಗಿಲ್ಲವೇ ಅಥವಾ ಬೆಳೆ ವಿಮೆ ಅರ್ಜಿ ತಿರಸ್ಕೃತವಾಗಿದೆಯೇ ಹಾಗಾದರೆ ಇಲ್ಲಿ ನೀಡಿದ ಮಾಹಿತಿಯಂತೆ ಕೆಲಸ ಮಾಡಿ ಅಂದರೆ ನಿಮಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಲ್ಲಿ ನೀಡಲಾದ ಕೊನೆಯ ದಿನಾಂಕದೊಳಗೆ ಆಕ್ಷೇಪಣೆ ಸಲ್ಲಿಸಿ. ಹಾಗೂ ಅರ್ಜಿ ಎಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಎಲ್ಲಿ ಭೇಟಿ ನೀಡಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಮೆಕ್ಕೆಜೋಳಕ್ಕೆ ವಿಮಾ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

ಬೆಳೆ ಸಮೀಕ್ಷೆಯ ಫೋಟೋ ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಕಾರಣ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ. ಇಂತಹ ಅರ್ಜಿಗಳ ಪಟ್ಟಿ ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿ ಪರಿಶೀಲಿಸಬೇಕು. ತಮಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು.) ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳ ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿ ಸಲ್ಲಿಸಬಹುದು.

ಆಕ್ಷೇಪಣೆ ಸಲ್ಲಿಸಲು ಏಪ್ರೀಲ್ 25 ಕೊನೆಯ ದಿನ. ಸಲ್ಲಿಕೆ ಆಧ ಮನವಿಗಳ ಬಗ್ಗೆ ಆಯಾ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

still crop insurance not credited ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಿಂಗಾರು, ಬೇಸಿಗೆ ಹಂಗಾಮಿನಲ್ಲಿ ನೋಂದಾಯಿಸಿದ ರೈತ ಸುರಕ್ಷಾ ಪ್ರದಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ಬೆಳೆ ಹಾಗೂ ಪಹಣಿಯಲ್ಲಿ ದಾಖಲಾದ ಬೆಳೆ ವ್ಯತ್ಯಾಸದಿಂದ ಮುಂಗಾರು ಹಾಗೂ ಹಿಂಗಾರಿನ ಹಂಗಾಮಿನ ಬೀಳಗೆ ತಾಲೂಕಿನ 45 ಪ್ರಸ್ತಾವಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ.

ತಿರಸ್ಕೃತ ಪ್ರಸ್ತಾವಗಳ ಪಟ್ಟಿಯನ್ನು ಬೀಲಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತೋಟಗಾರಿಕೆ ಇಲಾಖೆಯಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ Ration card list ನಿಂದ ಹೆಸರು ಡಿಲೀಟ್ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ತಿರಸ್ಕೃತ ಪ್ರಸ್ತಾವಗಳ ಬಗ್ಗೆ ಆಕ್ಷುಪಣೆ ಇದ್ದಲ್ಲಿ ಸಂಬಂಧಪಟ್ಟ ರೈತರು ಪ್ರಕಟಣೆಯ ದಿನಾಂಕದಿಂದ 15 ದಿನದೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ  ಹೀಗೆ ಚೆಕ್ ಮಾಡಿ

ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು  ಈ ನೀವು ಗೂಗಲ್ ನಲ್ಲಿ samrakshane ಎಂದು ಟೈಪ್ ಮಾಡಬೇಕು ಅಥವಾ

https://www.samrakshane.karnataka.gov.in/

. ಅಲ್ಲಿ ನೀವು ವರ್ಷ 2025-2026 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.  ನಂತರ  Check status ಮೇಲೆ ಕ್ಲಿಕ್ ಮಾಡಬೇಕು. ನಂತರ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Captha ಕೋಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು.  View Details ಮೇಲೆ ಕ್ಲಿಕ್ ಮಾಡಬೇಕು. ಪ್ರಸಕ್ತ ಸಾಲಿನಲ್ಲಿ ರೈತರು ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ಮಾಡಿಸಿದವರು ಹಾಗೂ ಕಳೆದ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರೂ ಸಹ ತಮ್ಮ ಬೆಳೆ ವಿಮೆಯ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Leave a Comment