rain alert check date : ರಾಜ್ಯದಲ್ಲಿರುವ ರಣ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿಗೆ ಯಾವ ಯಾವ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದರನ್ನು ಸಹ ಇಲ್ಲಿ ನೀಡಲಾದ ಮೊಬೈಲ್ ನಂಬರಿಗೆ ಕರೆ ಮಾಡಿಮಾಹಿತಿ ಪಡೆಯಬಹುದು. ಹಾಗಾದರೆ ವರುಣಮಿತ್ರ ಸಹಾಯವಾಣಿ ನಂಬರ್ ಯಾವುದು ಮತ್ತು ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಏಪ್ರೀಲ್ 20 ರವರೆಗೆ ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರೀಲ್ 21 ರವರೆಗೆ ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ಜಿಲ್ಲೆಗಳಲ್ಲಿ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದರೆಡು ಕಡೆಗಳಲ್ಲಿ ಸಾಯಂಕಾಲದ ವೇಳೆಗೆ ಮಳೆಯಾಗಬಹುದು. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
rain alert check date ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ :ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ರೈತರ ಆಕ್ಷೇಪಣೆಗೆ ಅವಕಾಶ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





