ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

Written by Ramlinganna

Published on:

rain alert again14 district : ರಾಜ್ಯದಲ್ಲಿ ಬಿಸಿಲಿನ ಝಳ ಒಂದೆಡೆಯಾದರೆ ಇನ್ನೊಂದೆಡೆ ಗುಡುಗು ಸಿಡಿಲಿನ ಆರ್ಭಟ ಮುಂದುವರೆದಿದೆ. ಹೌದು, ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಬಹುದು.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರಡವಾ, ಬೆಳಗಾವಿ,ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದ್ದು, ಬಲವಾಗಿ ಗಾಳಿ ಬೀಸುವ ಸಾಧ್ಯತೆಯಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಭಾಗದ ಉತ್ತರ ಕನ್ನಡ,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

rain alert again14 district ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ರೈತರಿಗೆ ತಿಂಗಳಿಗೆ 3 ಸಾವಿರ ಪೆನ್ಶನ್ ಸಿಗುವ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಬಗ್ಗೆ ಮಾಹಿತಿ ಇಲ್ಲಿದೆ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

 

Leave a Comment