ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ನಿಮ್ಮ ರಿಸಲ್ಟ್ ಇಲ್ಲಿ ಹೀಗೆ ನೋಡಿ

Written by Ramlinganna

Published on:

SSLC Result check here : ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಹೌದು,  ಎಸ್ಎಸ್ಎಲ್ಸಿ ಪರೀಕ್ಷೆ -1 ರ ಫಲಿತಾಂಶವನ್ನು ಇಂದು (ಏಪ್ರೀಲ್ 23) ರಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಸಂಬಂಧಪಟ್ಟ ಶಾಲೆಗಳಿಗೂ ಸಹ ಇದೇ ಸಮಯದಲ್ಲಿ ಫಲಿತಾಂಶದ ಪಟ್ಟಿಯನ್ನು ಲಭ್ಯಗೊಳಿಸಲಾಗುವುದು.

SSLC Result check here ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ನೋಡಬೇಕಾದರೆ ನೀವು

https://karresults.nic.in

ಮೂಲಕ ಪಡೆಯಬಹುದು.

ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರೆಜಿಸ್ಟರ್ ನಂಬರ್ ನಮೂದಿಸಬೇಕು. ನಂತರ ಜನ್ಮ ದಿನಾಂಕ ನಮೂದಿಸಬೇಕು. ಇದಾದ ನಂತರ ನೀವು  ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಎಸ್ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಷ್ಟು ಅಂಕ ಬಂದಿದೆ ಎಂಬ ಮಾಹಿತಿ ಸಿಗುತ್ತದೆ. ಅಂದರೆ ನಿಮ್ಮ ರಿಸಲ್ಟ್ ತೆರೆದುಕೊಳ್ಳುತ್ತದೆ. ಅದನ್ನು ನೀವು ಸೇವ್ ಮಾಡಿಕೊಳ್ಳಬಹುದು.

ಅಲ್ಲದೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವ್ಯಾಟ್ಸ್ ಅಪ್ ಅಥವಾ ಎಸ್ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಈ ವರ್ಷದ ವಿಶೇಷತೆ ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಲಭ್ಯ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು (ಮಾರ್ಕ್ಸ್ ಕಾರ್ಡ್) ಫಲಿತಾಂಶ ಪ್ರಕಟವಾದ ತಕ್ಷಣವೇ ಡಿಜಿಲಾಕರ್ ನಲ್ಲಿ ಲಭ್ಯವಾಗುಂತೆ ಮಾಡಿದೆ.

ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ

https://www.digilocker.gov.in/

ವೆಬ್ಸೈಟ್ ಗೆ  ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಕಲಬುರಗಿ ಸರ್ಕಾರಿ ಅಂಧ ಬಾಲಕರ ಪ್ರೌಢಶಾಲೆಯಲ್ಲಿ ಪ್ರವೇಶಾತಿ ಪ್ರಾರಂಭ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿಯಲ್ಲಿ ಕಲಬುರಗಿ ನಗರದಲ್ಲಿ ಸರ್ಕಾರಿ ಅಂಧ ಬಾಲಕರ ಪ್ರೌಢಶಾಲೆ ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಯಲ್ಲಿ                2026-27ನೇ ಸಾಲಿಗೆ 1 ರಿಂದ 10ನೇ ತರಗತಿವರೆಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಲಬುರಗಿ ಸರ್ಕಾರಿ ಅಂಧ ಬಾಲಕರ ಪ್ರೌಢಶಾಲೆಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಶಾಲೆಯಲ್ಲಿ 6 ರಿಂದ 18 ವರ್ಷದೊಳಗಿನ ಅಂಧ ಬಾಲಕರು ಪ್ರವೇಶ ಪಡೆಯಬಹುದಾಗಿದೆ. ಶಾಲೆಯಲ್ಲಿ ಪ್ರವೇಶ ಪಡೆದ ಅಂಧ ಬಾಲಕರಿಗೆ ಶಿಕ್ಷಣ, ಸಂಗೀತ, ಕಂಪ್ಯೂಟರ್, ಇತ್ಯಾದಿ ತರಬೇತಿ ಜೋತೆಗೆ ಮಕ್ಕಳಿಗೆ ಉಚಿತ ವಸತಿ, ಊಟ ಮತ್ತು ಸಮವಸ್ತç ಒದಗಿಸಲಾಗುತ್ತದೆ.

ಇದನ್ನೂ ಓದಿ ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸ್ಮಿತಾ ಇವರ ಮೊಬೈಲ್ ಸಂಖ್ಯೆ-9986594149, ಸಂಗಮ್ಮ-8792259776, ಜಯಶ್ರೀ-9591037444, ಮಹ್ಮದ ಖಾಜಾ-9611221259, ಘಾಳೇಪ್ಪ-8088224622, ಶ್ರೀಕಾಂತ-9972620297, ಪ್ರಕಾಶ ಭಜಂತ್ರಿ-9686363287, ಜಗದೀಶ್ ನಾಯ್ಕ್-8088893731 ಹಾಗೂ ಶಾಂತಪ್ಪ-9632028955 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment