relief package to farmers ಕೊವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಚದಲ್ಲಿರುವ ರೈತರಿಗೆ, ಅಸಂಘಟಿತ ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು 1250 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ಲಾಕ್ಡೌನ್ ನಿಂದಾಗಿ ತರಕಾರಿ, ಹೂವು ಹಣ್ಣು ಬೆಳೆಯುವ ರೈತರಿಗೆ ಖರೀದಿದಾರರಿಲ್ಲದೆ ಹಾನಿಯಾಗಿತ್ತು. ಹಾಕಿದ ಖರ್ಚು ಬರದೆ ರೈತರ ಸಂಕಷ್ಟದಲ್ಲಿ ಸಿಲುಕಿದ್ದರು. ಹೀಗಾಗಿ ರೈತರಿಗೆ ನೆರವಾಗಲಿ ಎಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿಯವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೂವು ಬೆಳೆಗಾರರಿಗೆ ಹಾನಿಯಾಗಿದ್ದರೆ ಹೆಕ್ಟೇರಿಗೆ 10 ಸಾವಿರ ರೂಪಾಯಿ ಘೋಷಿಸಿದ್ದಾರೆ. ಇದು 20 ಸಾವಿರ ರೈತರಿಗೆ 12.73 ಕೋಟಿ ಖರ್ಚಾಗುತ್ತದೆ. ಅದರೇ ರೀತಿ ಹಣ್ಣು ತರಕಾರಿ, ಬೆಳೆಯುವ ರೈತರಿಗೂ ಪ್ರತಿ ಹೆಕ್ಟೇರಿಗೆ 10ಸಾವಿರ ರೂಪಾಯಿ ಪರಿಹಾರ ನೀಡಿದದ್ರೆ. ಸುಮಾರು 70 ಸಾವಿರ ರೈತರಿಗೆ ಇದರ ಪ್ರಯೋಜನ ಸಿಗಲಿದೆ.
relief package to farmers ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ
ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಕಂತಿನ ಮರುಪಾವತಿಯನ್ನು 31-07-2021ರವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಅವಧಿಯಲ್ಲಿನ ಬಡ್ಡಿ ಮೊತ್ತವನ್ನು ಸರ್ಕಾರದವೇ ಪಾವತಿಸಲಿದೆ ಇದಕ್ಕಾಗಿ 135 ಕೋಟಿ ರೂಪಾಯಿ ಖರ್ಚು ಆಗಲಿದೆ.
ಇದನ್ನೂ ಓದಿ ನಿಮ್ಮ ಜಮೀನಿನ ಹಳೆಯ ಪಹಣಿ ಇಲ್ಲೇ ಚೆಕ್ ಮಾಡಿ
ಆಟೋ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಗಳ ಚಾಲಕರಿಗೆ ತಲಾ 3 ಸಾವಿರ ರೂಪಾಯಿ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿ, ಅಸಂಘಟಿತ ವಲಯದ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ , ಬೀದಿ ವ್ಯಾಪಾರಿಗಳಿಗೆ 2 ಸಾವಿರ ಹಾಗೂ ಕಲಾವಿದರು ಮತ್ತು ಕಲಾತಂಡಗಳಿಗೆ 3 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ತರಕಾರಿ, ಹೂವು ಹಣ್ಣು ಬೆಳೆದ ರೈತರು ತಮಗೆ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಹೌದು,ಇದಕ್ಕಾಗಿ ರೈತರು ಯಾರ ಸಹಾಯವೂ ಇಲ್ಲದೆ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.ಅದು ಹೇಗ ಅಂದುಕೊಂಡಿದ್ದಾರಾ ನೀವು ಗೂಗಲ್ ನಲ್ಲಿ ಇಂಗ್ಲೀಷ್ ನಲ್ಲಿ ಪರಿಹಾರ ಪೇಮೆಂಟ್ ರಿಪೋರ್ಟ್ ಟೈಪ್ ಮಾಡಬೇಕು ನಂತರ ಅಲ್ಲಿ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಇದಾದ ನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕಾಗುತ್ತದೆ. ನಂತರ ಪ್ರಸಕ್ತ ಸಾಲಿನ ವರ್ಷ ಆಯ್ಕೆಮಾಡಿಕೊಳ್ಳಬೇಕು. ನಂತರ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ ನಿಮಗೆ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಇದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು..