ಇಂದು ರಾಜ್ಯದ ಈ 19 ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

rain alert in 19 district :  ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಏಪ್ರೀಲ್ 30 ಹಾಗೂ ಮೇ 1 ರಂದು) ಎರಡು ದಿನಗಳ ಕಾಲ ಮಳೆಯಾಗಲಿದೆ. ಕರಾವಳಿಯಲ್ಲಿ ಸುಡುವ ಬಿಸಿಲು ಹಾಗೂ ತೇವಾಂಶ ಮುಂದುವರಿಯಲಿದ್ದು, ಉಡುಪಿಯಲ್ಲಿ ಕೇವಲ ಗುಡುಗು ಸಿಡಿಲಿನ ಆರ್ಭಟ ಇರಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯೆತೆಯಿರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಏಪ್ರೀಲ್  30 ರಂದು ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹಾಗೂ ಮೇ 1 ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಮಳೆ ಹಾಗೂ ಬಿರುಗಾಳಿ ಬರುವ ಕಾರಣಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿ ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

rain alert in 19 district  ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದೀರಾ 50 ಸಾವಿರವರೆಗೆ ಸ್ಕಾಲರಶಿಪ್ ಸಿಗಲಿದೆ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment