Grahalakshmi amount credit soon : ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ಮುಂದಿನ ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಅವರು ಬೆಳಗಾವಿ ತಾಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಇದೇ ಯೋಜನೆಯ ಏಪ್ರೀಲ್ ಕಂತಿನ ಹಣವೂ ಎಂಟರಿಂದ ಹತ್ತು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಬಾಕಿ ಉಳಿದ ಕಂತುಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಯಾವ ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ. ಹಣ ಜಮೆಯಾಗದಿದ್ದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಅರ್ಹತೆ ಪಡೆದಿದ್ದರೆ ಮಾತ್ರ ಅವರ ಖಾತೆಗೆ ಜಮೆಯಾಗಲಿದೆ. ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು. ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ವ್ಯತ್ಯಾಸವಾಗಿದ್ದರೆ ಹಣ ಜಮೆ ಮಾಡುವ ಪ್ರಕ್ರಿಯೆಯನ್ನು ತಡೆಹಿಡಿಯಲಾಗುವುದು. ರೇಷನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಮುಖ್ಯಸ್ಥವೆಂದು ನಮೂದಾಗಿರಬೇಕು. ಆಗ ಮಾತ್ರ ಅವರ ಖಾತೆಗೆ ಹಣ ಜಮೆಯಾಗಲಿದೆ.
Grahalakshmi amount credit soon ಹಣ ಜಮೆಯಾಗದಿದ್ದರೆ ಏನು ಮಾಡಬೇಕು ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದರೂ ಹಣ ಜಮೆಯಾಗದಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಬ ಖರಾಬು ಜಮೀನಿದಯೇ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಪಡಿತರ ಚೀಟಿಯಲ್ಲಿ ಮುಖ್ಯಸ್ಥರಾಗಿರುವ ಮಹಿಳೆಯ ಆಧಾರ್ ಸಕ್ರೀಯವಾಗಿರಬೇಕು. ಬ್ಯಾಂಕ್ ಖಾತೆಯಲ್ಲಿ ಇಕೆವೈಸಿ ಅಪ್ಡೇಟ್ ಆಗಿರಬೇಕು.
Grahalakshmi amount credit soonಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಯಾರಿಗೆ ಕರೆ ಮಾಡಬೇಕು?
ಗೃಹಲಕ್ಷ್ಮೀ ಯೋಜನೆಯ 27ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ? ಹೀಗೆ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.





